ಸೋಮವಾರ, ಅಕ್ಟೋಬರ್ 26, 2020
28 °C

ಮಹಾರಾಷ್ಟ್ರದ ಭಿವಾಂಡಿಯಲ್ಲಿ ಕಟ್ಟಡ ದುರಂತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಸಂಭವಿಸಿದ ಮೂರು ಮಹಡಿಗಳ ಕಟ್ಟಡ ಕುಸಿತದ ಸತ್ತಿರುವವರ ಸಂಖ್ಯೆ 20ಕ್ಕೆ ಏರಿಕೆ ಆಗಿದೆ.

ಸತತ 24 ಗಂಟೆಗಳ ನಂತರವೂ ರಕ್ಷಣಾ ಕಾರ್ಯ ಮುಂದುವರಿದಿದೆ. ಮೃತಪಟ್ಟಿರುವವರಲ್ಲಿ ಎಂಟು ಮಕ್ಕಳು ಸೇರಿದ್ದಾರೆ. ಸೋಮವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಕಲ್ಲು ಮಣ್ಣುಗಳ ಅಡಿ ಸಿಲುಕಿದ್ದ ಅಫ್ಸಾನಾ ಅನ್ಸಾರಿ ಎಂಬ 15 ವರ್ಷದ ಬಾಲಕಿಯ ದೇಹವನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ. ಇಲ್ಲಿವರೆಗೂ ಸುಮಾರು 23 ಮಂದಿಯನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. 

ಸೋಮವಾರ ಮುಂಜಾನೆ 3.40ರ ಸಮಯದಲ್ಲಿ 43 ವರ್ಷಗಳಷ್ಟು ಹಳೆಯದಾದ ಜಿಲಾನಿ ಕಟ್ಟಡ ಕುಸಿದಿದ್ದು, ಘಟನೆಯ ವೇಳೆಯಲ್ಲಿ 10 ಮಂದಿ ಮೃತಪಟ್ಟಿದ್ದರು. ಕಟ್ಟಡದ ಅವಶೇಗಳಡಿ 25ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ  ಓದಿ: ಮಹಾರಾಷ್ಟ್ರ: ಭಿವಾಂಡಿಯಲ್ಲಿ ಮೂರು ಮಹಡಿ ಕಟ್ಟಡ ಕುಸಿತ, 10 ಸಾವು

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು