ಬುಧವಾರ, ಅಕ್ಟೋಬರ್ 28, 2020
20 °C

ಭಿವಂಡಿ ಕಟ್ಟಡ ಕುಸಿತ ಪ್ರಕರಣ; ಸತ್ತವರ ಸಂಖ್ಯೆ 33ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಥಾಣೆ: ಮಹಾರಾಷ್ಟ್ರದ ಭಿವಂಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಸತ್ತವರಲ್ಲಿ ಮೂವರು ಪುಟ್ಟ ಮಕ್ಕಳು ಸೇರಿದಂತೆ 15 ವರ್ಷ ವಯೋಮಾನದ ಹದಿನೈದು ಮಕ್ಕಳು ಸೇರಿದ್ದಾರೆ. ಸುರಿಯುವ ಮಳೆಯ ನಡುವೆಯೇ ಇಡೀ ರಾತ್ರಿ ರಕ್ಷಣಾ ಕಾರ್ಯ ಮುಂದುವರಿದಿದೆ.

ಇಲ್ಲಿವರೆಗೂ ಕಟ್ಟಡದ ಅವಶೇಷಗಳಡಿ 25 ಮಂದಿಯನ್ನು ರಕ್ಷಿಸಲಾಗಿದ್ದು ಅವರು, ಭಿವಂಡಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಿಂದ ಕಟ್ಟಡದ ಅವಶೇಷಗಳ ಅಡಿ ಸಿಲುಕಿಕೊಂಡಿದ್ದ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

43 ವರ್ಷದಷ್ಟು ಹಳೆಯದಾದ ಮೂರು ಅಂತಸ್ತಿನ ಜಿಲಾನಿ ಕಟ್ಟಡ ಸೋಮವಾರ ಮುಂಜಾನೆ 3.40ರ ಸುಮಾರಿಗೆ ಕುಸಿದುಬಿದ್ದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಠಾಣೆಯಿಂದ 10 ಕಿ.ಮೀ ದೂರದಲ್ಲಿರುವ ಭಿವಿಂಡಿಯ ಈ ಕಟ್ಟಡದಲ್ಲಿ  40 ಫ್ಲ್ಯಾ ಟ್‌ಗಳಿದ್ದು, ಇದರಲ್ಲಿ 150 ಮಂದಿ ವಾಸಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:
ಮಹಾರಾಷ್ಟ್ರದ ಭಿವಾಂಡಿಯಲ್ಲಿ ಕಟ್ಟಡ ದುರಂತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ
ಮಹಾರಾಷ್ಟ್ರ: ಭಿವಾಂಡಿಯಲ್ಲಿ ಮೂರು ಮಹಡಿ ಕಟ್ಟಡ ಕುಸಿತ, 10 ಸಾವು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು