ಶನಿವಾರ, ಸೆಪ್ಟೆಂಬರ್ 18, 2021
30 °C

ಮುಂಬೈ: ನಿರ್ಮಾಣ ಹಂತದ ಕಟ್ಟಡದ ಎಲಿವೇಟರ್ ಕುಸಿದು ಕನಿಷ್ಠ ನಾಲ್ವರು ಸಾವು

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ಮುಂಬೈ: ನಗರದ ವರ್ಲೀ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಎಲಿವೇಟರ್ ಶನಿವಾರ ಸಂಜೆ ಕುಸಿದು ಬಿದ್ದು ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ.

ವರ್ಲೀ ಪ್ರದೇಶದ ಹನುಮಾನ್ ಗಲ್ಲಿಯ ಸಮೀಪದ ಕಟ್ಟಡದಲ್ಲಿ ಸಂಜೆ 5.45ಕ್ಕೆ ಘಟನೆ ಸಂಭವಿಸಿದೆ.

ಮೃತಪಟ್ಟವರನ್ನು ಅವಿನಾಶ್ ದಾಸ್ (35), ಭರತ್ ಮಂಡಲ್ (28) ಮತ್ತು ಚಿನ್ಮಯ್ ಮಂಡಲ್ (33) ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಲಕ್ಷ್ಮಣ್ ಮಂಡಲ್ (35) ಎಂಬವರು ಗಾಯಗೊಂಡಿದ್ದು, ಇವರ ಸ್ಥಿತಿ ಚಿಂತಾಜನಕವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು