ಮುಂಬೈ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಎಂದುಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಗುರುವಾರ ಹೇಳಿದ್ದಾರೆ.ಚುನಾವಣೆಗಳಲ್ಲಿ ಇವಿಎಂಗಳ ಬದಲುಪೇಪರ್ ಬ್ಯಾಲೆಟ್ಗಳನ್ನು ಬಳಸಬೇಕುಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿರುವಬೆನ್ನಲ್ಲೇಪವಾರ್ ಈ ಹೇಳಿಕೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ʼಇವಿಎಂಗಳನ್ನು ಬಳಸಿ ಚುನಾವಣೆಗಳನ್ನು ನಡೆಸಲಾದ ರಾಜಸ್ಥಾನ ಮತ್ತು ಪಂಜಾಬ್ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದೆ.ರಾಜಕೀಯ ಪಕ್ಷಗಳು ಸಾಮಾನ್ಯವಾಗಿ ಮಾಡುವುದೇನೆಂದರೆ, ಒಂದುವೇಳೆ ಚುನಾವಣೆಗಳಲ್ಲಿ ತಮಗೆ ಬಾರೀ ಜನಾದೇಶ ಸಿಕ್ಕಿತೆಂದರೆ ಎಲ್ಲವೂ ಚೆನ್ನಾಗಿರುತ್ತದೆ. ಆದರೆ, ಸೋಲು ಕಂಡರೆ ಕೂಡಲೇ ಇವಿಎಂಗಳನ್ನು ದೂರಲಾರಂಭಿಸುತ್ತಾರೆ. ಆದರೆ ನನಗೆ ಇವಿಎಂಗಳ ಮೇಲೆ ಸಂಪೂರ್ಣ ವಿಶ್ವಾಸವಿದೆʼ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಮುಖ್ಯಸ್ಥರಾಗಿ ಇತ್ತೀಚೆಗೆ ನೇಮಕವಾಗಿರುವ ನಾನಾ ಪಟೋಲೆ ಅವರು, ಚುನಾವಣೆಗಳಲ್ಲಿ ಇವಿಎಂಗಳ ಬದಲು ಬ್ಯಾಲೆಟ್ ಪೇಪರ್ಗಳನ್ನು ಬಳಸುವ ಆಯ್ಕೆಯನ್ನು ಮತದಾರರಿಗೆ ನೀಡುವ ಕಾನೂನನ್ನು ರಚಿಸಬೇಕು ಎಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಪವಾರ್, ಕಾಂಗ್ರೆಸ್ ಬ್ಯಾಲೆಟ್ ಪತ್ರ ಬಳಕೆಯ ಬಗ್ಗೆ ಪ್ರಸ್ತಾಪಿಸಿದರೆ, ಚರ್ಚಿಸಬಹುದು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.