ಶನಿವಾರ, ನವೆಂಬರ್ 28, 2020
17 °C

ಮಹಾರಾಷ್ಟ್ರ: ಹಲವು ತಿಂಗಳುಗಳ ನಂತರ ಮತ್ತೆ ತೆರೆದ ಶಿರಡಿ ಸಾಯಿಬಾಬಾ ದೇವಸ್ಥಾನ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಶಿರಡಿ: ಕೋವಿಡ್‌ ಹಿನ್ನೆಲೆಯಲ್ಲಿ ಹಲವು ತಿಂಗಳುಗಳ ಕಾಲ ಮುಚ್ಚಲಾಗಿದ್ದ ಸಾಯಿಬಾಬಾ ದೇವಸ್ಥಾನವನ್ನು ಸೋಮವಾರ ಮತ್ತೆ ತೆರೆಯಲಾಗಿದ್ದು, ಭಕ್ತರು ಪ್ರಾರ್ಥನೆ ಸಲ್ಲಿಸಿದರು.

ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಪರಸ್ಪರ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್‌–19 ಸಂಬಂಧಿತ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ದೇವಸ್ಥಾನದಲ್ಲಿ ವಹಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಇಂದಿನಿಂದ ಜಾರಿಗೆ ಬರುವಂತೆ ದೇವಸ್ಥಾನಗಳನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಹಾರಾಷ್ಟ್ರವು ಭಾರತದ ಕೊರೊನಾ ಸೋಂಕಿನ ಕೇಂದ್ರಬಿಂದುವೆಂದೇ ಪರಿಗಣಿಸಲ್ಪಟ್ಟಿದೆ.

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು