ಗುರುವಾರ , ಆಗಸ್ಟ್ 18, 2022
25 °C

ಮಹಾ ಸಂಕಟ | ಉದ್ಧವ್ ಠಾಕ್ರೆ ಪೋಸ್ಟರ್‌ಗಳಿಗೆ ಕಪ್ಪು ಬಣ್ಣ ಬಳಿದ ಶಿಂಧೆ ಬೆಂಬಲಿಗರು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪೋಸ್ಟರ್‌ಗಳಿಗೆ ಶಿವಸೇನಾ ಬಂಡಾಯ ಶಾಸಕ ಏಕನಾಥ ಶಿಂಧೆ ಅವರ ಬೆಂಬಲಿಗರು ಕಪ್ಪು ಬಣ್ಣ ಬಳಿದಿದ್ದಾರೆ. 

ಸದ್ಯ ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಉದ್ಧವ್ ಠಾಕ್ರೆ ಪೋಸ್ಟರ್‌ಗಳಿಗೆ ಕಪ್ಪು ಬಣ್ಣ ಬಳಿದಿರುವ ಘಟನೆ ರಾಜಕೀಯ ವಲಯದಲ್ಲಿ ಪರ –ವಿರೋಧದ ಚರ್ಚೆಗೆ ಕಾರಣವಾಗಿದೆ.

ಗುವಾಹಟಿಯ ರ್‍ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಶಿವಸೇನಾದ ಬಂಡಾಯ ಶಾಸಕರೊಂದಿಗೆ ಗುಂಪಿನ ನಾಯಕ ಏಕನಾಥ ಶಿಂಧೆ ಅವರು ಇಂದು ಸಭೆ ನಡೆಸಿದ್ದು, ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏಕನಾಥ ಶಿಂಧೆ ಅವರ ನಡೆ ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.

ಓದಿ... ಶಿವಸೇನಾ ಬಂಡಾಯ ಶಾಸಕರಿಗೆ ‘Y+’ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ಓದಿ... 'ಗುವಾಹಟಿಯಲ್ಲಿ ಎಷ್ಟು ದಿನ ಅಡಗಿರುವಿರಿ'–ಶಿವಸೇನಾ ಬಂಡಾಯ ಶಾಸಕರಿಗೆ ರಾವುತ್‌ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು