ಗುರುವಾರ , ಸೆಪ್ಟೆಂಬರ್ 29, 2022
26 °C

ಮಹಾರಾಷ್ಟ್ರ: ಕೇಂದ್ರದ ಮಾಜಿ ಸಚಿವ ಮಾಣಿಕ್‌ರಾವ್ ಗವಿತ್ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಮಾಣಿಕ್‌ರಾವ್‌ ಗವಿತ್ ಅವರು ನಾಸಿಕ್‌ನ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ಗವಿತ್ ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನೇತೃತ್ವದ ಸರ್ಕಾರದಲ್ಲಿ (2004 ರಲ್ಲಿ) ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವರಾಗಿ ಮತ್ತು 2013ರಲ್ಲಿ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.

ಬುಡಕಟ್ಟು ಸಮುದಾಯ ಪ್ರಾಬಲ್ಯವಿರುವ ನಂದೂರ್ಬರ್ ಕ್ಷೇತ್ರದಿಂದ 1980–2009ರ ಅವಧಿಯಲ್ಲಿ 9 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಗವಿತ್, 2014ರ ಚುನಾವಣೆಯಲ್ಲಿ ಸೋಲು ಕಂಡಿದ್ದರು.

ಅವರ ಮಗಳು ನಿರ್ಮಲಾ ಗವಿತ್‌, ಇಗಟ್‌ಪುರಿ ಕ್ಷೇತ್ರದಲ್ಲಿ 2009 ಹಾಗೂ 2014ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಆದರೆ, 2019ರಲ್ಲಿ ಶಿವಸೇನಾದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು.

ಮಾಣಿಕ್‌ರಾವ್‌ ಪುತ್ರ ಭರತ್‌, 2019ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್‌ ಸಿಗದ ಕಾರಣ ಬಿಜೆಪಿಗೆ ಸೇರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು