ಪಾಕಿಸ್ತಾನ ಕಡಲ ಭದ್ರತಾ ಪಡೆ ಗುಂಡಿನ ದಾಳಿಗೆ ಮಹಾರಾಷ್ಟ್ರದ ಮೀನುಗಾರ ಸಾವು

ದೇವಭೂಮಿ– ದ್ವಾರಕಾ (ಗುಜರಾತ್): ಗುಜರಾತ್ ಕರಾವಳಿ ತೀರದಲ್ಲಿ ಪಾಕಿಸ್ತಾನ ಕಡಲ ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಮಹಾರಾಷ್ಟ್ರದ ಮೀನುಗಾರರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಮೀನುಗಾರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರ ಸಂಜೆ 4 ಗಂಟೆಗೆ ‘ಜಲಪರಿ’ ದೋಣಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.
ದೋಣಿಯಲ್ಲಿ ಗುಜರಾತಿನ ಐವರು ಹಾಗೂ ಮಹಾರಾಷ್ಟ್ರದ ಇಬ್ಬರು ಮೀನುಗಾರರಿದ್ದರು. ಅದರಲ್ಲಿ ಒಬ್ಬ ಮೀನುಗಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಜೋಷಿ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.