ಪುಣೆ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೇಕರ್ (89) ಬುಧವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಿವಾಜಿರಾವ್ ಅವರು ಹೃದ್ರೋಗ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಪುಣೆ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಜುಲೈ ತಿಂಗಳಲ್ಲಿ ಶಿವಾಜಿರಾವ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆದು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದರು.
ಮರಾಠವಾಡ ಪ್ರದೇಶದ ಲಾತೂರ್ನ ಹಿರಿಯ ಕಾಂಗ್ರೆಸ್ ಮುಖಂಡ ನೀಂಗೇಕರ್ ಅವರು ಜೂನ್ 1985 ರಿಂದ ಮಾರ್ಚ್ 1986ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. 1985ರಲ್ಲಿ ತಮ್ಮ ವಿರುದ್ಧ ವೈದ್ಯಕೀಯ ಪರೀಕ್ಷೆ ಹಗರಣದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.