ಸೋಮವಾರ, ಆಗಸ್ಟ್ 8, 2022
23 °C

'ಮಹಾ' ಬಹುಮತ ಸಾಬೀತು: ರಾಜ್ಯಪಾಲರ ಆದೇಶ ಪ್ರಶ್ನಿಸಿ 'ಸುಪ್ರೀಂ'ಗೆ ಎಂವಿಎ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ವಿಕಾಸ ಆಘಾಡಿ (ಎಂವಿಎ) ಸರ್ಕಾರಕ್ಕೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಸೂಚನೆ ನೀಡಿದ ಬೆನ್ನಲ್ಲೇ, ಇದರ ವಿರುದ್ಧ ಶಿವಸೇನಾ, ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿವೆ.

16 ಬಂಡಾಯ ಶಾಸಕರ ಅನರ್ಹತೆ ಪ್ರಕ್ರಿಯೆ ಬಗ್ಗೆ ಸುಪ್ರೀಂ ಕೋರ್ಟ್‌ ನಿರ್ಧಾರ ಹೊರಬೀಳುವ ಮೊದಲೇ ಬಹುಮತ ಸಾಬೀತಿಗೆ ಸೂಚನೆ ನೀಡಿರುವುದು ಕಾನೂನು ಬಾಹಿರ ಎಂದು ಶಿವಸೇನಾ ಸಂಸದ ಸಂಜಯ್‌ ರವುತ್‌ ಹೇಳಿದ್ದಾರೆ.

ಜೂನ್‌ 30ರಂದು ಬೆಳಿಗ್ಗೆ 11 ಗಂಟೆಗೆ ಬಹುಮತ ಸಾಬೀತು ಪಡಿಸಬೇಕು ಎಂದು ಪತ್ರದ ಮೂಲಕ ಕೋಶಿಯಾರಿ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಬಂಡಾಯ ಶಾಸಕರ ಅನರ್ಹತೆ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಜುಲೈ 11ರವರೆಗೆ ಮುಂದೂಡಿದೆ.

ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ ಎಂದು ಹಿರಿಯ ಮುಖಂಡ ಪೃಥ್ವಿರಾಜ್‌ ಚವಣ್‌ ಹೇಳಿದ್ದಾರೆ.

ಶಾಸಕಾಂಗ ಪಕ್ಷದಲ್ಲಿ ತಮಗೆ ಮೂರನೇ ಎರಡರಷ್ಟು ಬೆಂಬಲವಿದೆ ಮತ್ತು ಬೇರೆ ಪಕ್ಷದ ಜೊತೆಗೆ ವಿಲೀನಗೊಳ್ಳಲಿದ್ದೇವೆ ಎಂದು ಬಂಡಾಯ ಶಾಸಕರು ಪತ್ರವನ್ನು ನೀಡಬೇಕಾಗುತ್ತದೆ. ಶಿವಸೇನಾ ಶಾಸಕಾಂಗ ಪಕ್ಷವು ಇಬ್ಭಾಗಗೊಂಡಿರುವುದನ್ನು ಉಪಸಭಾಪತಿ ಮಾನ್ಯಮಾಡಲಿದ್ದಾರೆ. ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ಬಂಡಾಯ ಶಾಸಕರು ಎಂವಿಎ ವಿರುದ್ಧ ಮತ ಹಾಕಿದರೆ ಅವರು ಅನರ್ಹಗೊಳ್ಳಲಿದ್ದಾರೆ ಎಂದು ಚವಣ್‌ ತಿಳಿಸಿದ್ದಾರೆ.

ಇದೇ ವೇಳೆ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರು ರಾಜ್ಯಪಾಲರ ಪತ್ರದ ಕುರಿತಾಗಿ ಎಂವಿಎ ನಾಯಕರ ಜೊತೆ ಬುಧವಾರ ಸಭೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು