ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19: ರಾತ್ರಿ ಕರ್ಫ್ಯೂಗೆ ಮಹಾರಾಷ್ಟ್ರ ಸರ್ಕಾರದ ನಿರ್ಧಾರ

ಯುರೋಪ್‌ನಿಂದ ಬರುವವರಿಗೆ 14 ದಿನಗಳ ಕ್ವಾರಂಟೈನ್‌
Last Updated 21 ಡಿಸೆಂಬರ್ 2020, 21:15 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಮಹಾನಗರ ಪಾಲಿಕೆ ಪ್ರದೇಶಗಳಲ್ಲಿ ಡಿಸೆಂಬರ್‌ 22ರಿಂದ ಜನವರಿ 5ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲು ನಿರ್ಧರಿಸಲಾಗಿದೆ.

ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆ ಹಾಗೂ ಬ್ರಿಟನ್‌ನಲ್ಲಿ ಕೊರೊನಾ ವೈರಾಣುವಿನ ಹೊಸ ಸ್ವರೂಪವು ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಯುರೋಪ್‌ ಮತ್ತು ಪಶ್ಚಿಮ ಏಷ್ಯಾ ರಾಷ್ಟ್ರಗಳಿಂದ ಮಹಾರಾಷ್ಟ್ರಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗುವುದು. ಸೋಮವಾರದಿಂದ ಈ ನಿಯಮ ಜಾರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತರ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರನ್ನು ಮನೆಯಲ್ಲಿ ಕ್ವಾರಂಟೈನ್‌ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT