ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿಗೆ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
I have been tested positive for COVID -19. There are only mild symptoms. However I have been admitted to a Hospital as a precautionary measure.
— Governor of Maharashtra (@maha_governor) June 22, 2022
ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ರಾಜ್ಯಪಾಲರಿಗೆ ಕೋವಿಡ್ ಕಾಣಿಸಿಕೊಂಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆದಿದ್ದು, ಇಂದು ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದೆ.
ಈ ಮಧ್ಯೆ, ಶಿವಸೇನಾ ಶಾಸಕ ಮತ್ತು ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ತಮಗೆ 40 ಶಾಸಕರ ಬೆಂಬಲ ಇದೆ ಎಂದು ತಿಳಿಸಿರುವುದು ಮಹಾರಾಷ್ಟ್ರದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ.
ಓದಿ...
‘ಒಬ್ಬ ದುಷ್ಟ ರಾಜ’: ಟ್ವೀಟ್ ಮೂಲಕ ಉದ್ಧವ್ ಠಾಕ್ರೆಯನ್ನು ಕೆಣಕಿದ ಅಮೃತಾ ಫಡಣವೀಸ್
ಮಹಾ ಸಂಕಷ್ಟ: 40 ಶಾಸಕರ ಬೆಂಬಲ ಇದೆ ಎಂದ ಏಕನಾಥ್ ಶಿಂಧೆ
ಶಿವಸೇನಾದ ಶಿಂಧೆ, ಹಲವು ಶಾಸಕರ ಜತೆ ಗುಜರಾತ್ಗೆ: ಉದ್ಧವ್ ಸರ್ಕಾರಕ್ಕೆ ಕುತ್ತು?
ಉದ್ಧವ್ ಸರ್ಕಾರಕ್ಕೆ ಕುತ್ತು: ಎಚ್ಚರಿಕೆ ಕಡೆಗಣಿಸಿದ್ದೇ ಬಿಕ್ಕಟ್ಟಿಗೆ ಕಾರಣವೇ?
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.