ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ

Last Updated 18 ಏಪ್ರಿಲ್ 2022, 12:46 IST
ಅಕ್ಷರ ಗಾತ್ರ

ಮುಂಬೈ: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸರ ಅನುಮತಿ ಪಡೆಯುವುದನ್ನು ಮಹಾರಾಷ್ಟ್ರ ಸರ್ಕಾರ ಕಡ್ಡಾಯಗೊಳಿಸಿದೆ.

ಈ ವಿಚಾರವಾಗಿ ಮಹಾರಾಷ್ಟ್ರ ಡಿಜಿಪಿ ರಜನೀಶ್ ಸೇಠ್ ಹಾಗೂ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ಮಾರ್ಗಸೂಚಿ ಸಿದ್ಧಪಡಿಸಲಿದ್ದಾರೆ.

‘ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಅಧಿಸೂಚನೆ ಹೊರಡಿಸಲಿದ್ದೇವೆ’ ಎಂದು ಗೃಹ ಸಚಿವ ದಿಲೀಪ್ ವಸ್ಲೆ ಪಾಟೀಲ್ ಹೇಳಿದ್ದಾರೆ.

‘ಅನುಮತಿಸಲಾಗಿರುವ ಡೆಸಿಬಲ್ ಮಿತಿಯೊಳಗೆ ಮಾತ್ರ ಧ್ವನಿವರ್ಧಕಗಳ ಬಳಕೆಗೆ ಅವಕಾಶ ನೀಡಬೇಕು. ನಿಯಮವನ್ನು ಯಾರೇ ಉಲ್ಲಂಘಿಸಿದರೂ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಮುಸ್ಲಿಂ ಸಮುದಾಯದವರು ಧ್ವನಿವರ್ಧಕಗಳ ಮೂಲಕ ಮಸೀದಿಗಳಲ್ಲಿ ಆಜಾನ್ ನುಡಿಸುತ್ತಿರುವುದು ಸರಿಯಲ್ಲ. ಅವರು ಬದಲಾಗದಿದ್ದರೆ ಮಸೀದಿಗಳ ಮುಂದೆ ಅವರ ಧ್ವನಿವರ್ಧಕದ ಎರಡು ಪಟ್ಟು ಹನುಮಾನ್ ಚಾಲೀಸಾ ಹಾಕುತ್ತೇವೆ’ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾದ ಅಧ್ಯಕ್ಷ (ಎಂಎನ್‌ಎಸ್‌) ರಾಜ್ ಠಾಕ್ರೆ ಅವರು ಇತ್ತೀಚೆಗೆ ಹೇಳಿದ್ದರು. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಧ್ವನಿವರ್ಧಕ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯಗೊಳಿಸಲು ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT