ಶುಕ್ರವಾರ, ಮೇ 14, 2021
31 °C

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಸಿಕೆ ಖರೀದಿ: ಮಹಾರಾಷ್ಟ್ರ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ರಾಜ್ಯದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದು ಒಂದೆಡೆಯಾದರೆ, ಲಸಿಕೆ ಪೂರೈಕೆಯಲ್ಲಿಯೂ ಸುಧಾರಣೆ ಕಂಡುಬಂದಿಲ್ಲ. ಹೀಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋವಿಡ್‌–19 ಲಸಿಕೆ ಖರೀದಿಗಾಗಿ ಸಮಿತಿಯೊಂದನ್ನು ರಚಿಸಲು ಮಹಾರಾಷ್ಡ್ರ ಸರ್ಕಾರ ಚಿಂತನೆ ನಡೆಸಿದೆ.

18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆಗ, ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಬೇಕಾಗುತ್ತದೆ.  ಇದು ಕೂಡ ವಿದೇಶದಲ್ಲಿ ಲಸಿಕೆ ಖರೀದಿಸಲು ಮಹಾರಾಷ್ಟ್ರ ಚಿಂತನೆ ನಡೆಸಿರುವುದಕ್ಕೆ ಕಾರಣ ಎನ್ನಲಾಗುತ್ತಿದೆ.

‘ದೇಶದ ಕಂಪನಿಗಳಲ್ಲಿ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಾಗಲಿ; ಲಭ್ಯವಿರುವ ಕಡೆಯಿಂದ ಲಸಿಕೆ ಖರೀದಿಸುವ ಸಲುವಾಗಿ ಸಮಿತಿ ರಚಿಸಲು ಸಚಿವ ಸಂಪುಟದಲ್ಲಿ ಚರ್ಚಿಸಿದ್ದೇವೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ’ ಎಂದು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ನವಾಬ್‌ ಮಲಿಕ್‌ ಹೇಳಿದರು.

‘ಮೇ 24ರ ವರೆಗೆ ನೇರವಾಗಿ ರಾಜ್ಯಕ್ಕೆ  ಲಸಿಕೆ ಪೂರೈಕೆ ಸಾಧ್ಯವಿಲ್ಲ ಎಂಬುದಾಗಿ ಸೀರಂ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಿಯಾ ತಿಳಿಸಿದೆ’ ಎಂದು ಆರೋಗ್ಯ ಸಚಿವ ರಾಜೇಶ್‌ ಟೋಪೆ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು