ಗುರುವಾರ , ಅಕ್ಟೋಬರ್ 21, 2021
21 °C

ಮುಂಗಾರು ಪ್ರವಾಸೋದ್ಯಮಕ್ಕೆ ಆದ್ಯತೆ: ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಕೊಂಕಣ ವಲಯದಲ್ಲಿ ಮುಂಗಾರು ಪ್ರವಾಸೋದ್ಯಮ ಚಟುವಟಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರವು ಕಾರ್ಯತತ್ಪರವಾಗಿದೆ ಎಂದು ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಹೇಳಿದರು. 

ಅಲ್ಲದೆ, ಪೌರಾಣಿಕ ಚಲನಚಿತ್ರಗಳು ಮತ್ತು ಪ್ರಸಿದ್ಧ ಚಿತ್ರಕಥೆಗಳನ್ನು ಒಳಗೊಂಡ ಸಂಗ್ರಹಾಲಯಗಳ ಸ್ಥಾಪನೆ ಮೂಲಕ ರಾಜ್ಯವನ್ನು ಒಂದು ಚಲನಚಿತ್ರ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದರು.

ಸೆಪ್ಟೆಂಬರ್‌ 27ರ ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಮುನ್ನ ಶನಿವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಖಾಸಗಿ ಭಾಗವಹಿಸುವಿಕೆಗೆ ಪ್ರೋತ್ಸಾಹ ನೀಡಲಾಗುವುದು. ಕೋವಿಡ್‌ ಪರಿಣಾಮಗಳ ಹೊರತಾಗಿಯೂ ಖಾಸಗಿ ವಲಯದ ಆಸಕ್ತಿ ಪ್ರೋತ್ಸಾಹದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು