ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ: ಮೇ 15 ರಂದು ವಿಚಾರಣೆ

Last Updated 22 ಫೆಬ್ರುವರಿ 2021, 7:06 IST
ಅಕ್ಷರ ಗಾತ್ರ

ಠಾಣೆ: ಮಹಾರಾಷ್ಟ್ರ ನ್ಯಾಯಾಲವು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಮೇ15ರಂದು ನಿಗದಿ ಮಾಡಿದೆ.

2014ರಲ್ಲಿ ಠಾಣೆಯ ಭಿವಂಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಮಹಾತ್ಮ ಗಾಂಧೀಜಿ ಅವರ ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕೈವಾಡವಿದೆ ಎಂದು ಆರೋಪಿಸಿದ್ದರು. ಈ ವಿಡಿಯೊದ ಆಧಾರದ ಮೇಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ಸ್ಥಳೀಯ ಕಾರ್ಯಕರ್ತ ರಾಜೇಶ್‌ ಕುಂಟೆ ಅವರು ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

2018ರಲ್ಲಿ ಅರ್ಜಿ ವಿಚಾರಣೆ ನಡೆಸಿದ ಭಿವಂಡಿಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು,‘ ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಹೇಳಿತ್ತು.

ಇದೀಗ ನ್ಯಾಯಾಲಯವು ಈ ಅರ್ಜಿ ಸಂಬಂಧ ಶನಿವಾರ ವಿಚಾರಣೆ ನಡೆಸಿದೆ. ಈ ವೇಳೆ ರಾಹುಲ್‌ ಗಾಂಧಿ ಪರ ವಕೀಲರು ಕೋವಿಡ್‌ ಪ್ರಯಣ ನಿರ್ಬಂಧದಿಂದಾಗಿ ರಾಹುಲ್ ಗಾಂಧಿ ಅವರು ಕೋರ್ಟ್‌ಗೆ ಹಾಜರಾಗಲು ಸಾಧ್ಯವಿಲ್ಲ. ಇದರಲ್ಲಿ ನ್ಯಾಯಾಲಯ ವಿನಾಯತಿ ನೀಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ನ್ಯಾಯಾಲಯ ಸಮ್ಮತಿ ಸೂಚಿಸಿತ್ತು.

ಮ್ಯಾಜಿಸ್ಟ್ರೇಟ್‌ ಜೆ.ವಿ ಪಲಿವಾಲ್‌ ಅವರು,‘ ಈ ಪ್ರಕರಣ ಸಂಬಂಧ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಸದಂತೆ ಹೈಕೋರ್ಟ್‌ ತಡೆಯಾಜ್ಞೆ ನೀಡಿಲ್ಲ. ಹಾಗಾಗಿ ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆಯನ್ನು ಮೇ15 ರಂದು ನಡೆಸಲಾಗುವುದು. ಈ ವೇಳೆ ಅರ್ಜಿದಾರರ ಹೇಳಿಕೆಯನ್ನು ದಾಖಲಿಸಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT