ಮಂಗಳವಾರ, ಮೇ 18, 2021
30 °C

ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ ರೀತಿಯ ಕಠಿಣ ನಿರ್ಬಂಧ: ಮೇ 1ರ ವರೆಗೆ ನಿಷೇಧಾಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಕೋವಿಡ್–19 ಸೋಂಕು ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ ಮಾದರಿಯ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ.

ಏಪ್ರಿಲ್ 14ರಿಂದ ಮೇ 1ರ ವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಅಗತ್ಯ ಸೇವೆಗಳು, ಸಾರ್ವಜನಿಕ ಸಾರಿಗೆ, ಮುಂಬೈ ಉಪನಗರ ರೈಲು ಸೇವೆ ಲಭ್ಯವಿರಲಿವೆ.

ಓದಿ: 

ಅಗತ್ಯ ಸೇವೆ ವ್ಯಾಪ್ತಿಯಲ್ಲಿ ಒಳಪಡದವರು ಸೂಕ್ತ ಕಾರಣವಿಲ್ಲದೆ ಸಂಚರಿಸುವುದಕ್ಕೆ ಅನುಮತಿ ನೀಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ನಾವು ಕಠಿಣ ಕ್ರಮ ಕೈಗೊಳ್ಳಬೇಕಿದೆ. ಜನರ ಜೀವಗಳನ್ನು ಉಳಿಸಬೇಕಿದೆ. ನಾವಿದನ್ನು ನಿರ್ಬಂಧವೆಂದೋ ಲಾಕ್‌ಡೌನ್‌ ಎಂದೋ ಏನೆಂದು ಕರೆಯುತ್ತೇವೆ ಎಂಬುದು ಮುಖ್ಯವಲ್ಲ. ಕೊರೊನಾ ಓಡಿಸುವ ಕಾರ್ಯಾಚರಣೆ ಹಮ್ಮಿಕೊಳ್ಳೋಣ. ನಾವು ಸಾಂಕ್ರಾಮಿಕದ ವಿರುದ್ಧ ಹೋರಾಡಬೇಕಿದೆ. ಇದಕ್ಕೆ ಏನು ಅಗತ್ಯವಿದೆಯೋ ಅದನ್ನು ಮಾಡಬೇಕಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಓದಿ: 

ಈ ಮಧ್ಯೆ, ಮಂಗಳವಾರ ರಾಜ್ಯದಲ್ಲಿ 60,212 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 281 ಮಂದಿ ಮೃತಪಟ್ಟಿದ್ದಾರೆ. ಸದ್ಯ ರಾಜ್ಯದಲ್ಲಿ 5,93,042 ಸಕ್ರಿಯ ಪ್ರಕರಣಗಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು