ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ, ಮಹಾರಾಷ್ಟ್ರ, ಇತರ ಆರು ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಏರಿಕೆ: ಕೇಂದ್ರ

Last Updated 3 ಮಾರ್ಚ್ 2021, 12:07 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್, ಗುಜರಾತ್ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್–19 ಪ್ರಕರಣಗಳಲ್ಲಿ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳ ಪೈಕಿ ಶೇ 85.95 ಈ ರಾಜ್ಯಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ದೇಶದಲ್ಲಿ 24 ಗಂಟೆ ಅವಧಿಯಲ್ಲಿ 14,989 ಪ್ರಕರಣಗಳು ದೃಢಪಟ್ಟಿವೆ ಎಂದೂ ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ದಿನವೊಂದರ ಗರಿಷ್ಠ, 7,863 ಪ್ರಕರಣ ದೃಢಪಟ್ಟಿವೆ. ಕೇರಳದಲ್ಲಿ 2,938, ಪಂಜಾಬ್‌ನಲ್ಲಿ 729 ಹೊಸ ಪ್ರಕರಣಗಳು ವರದಿಯಾಗಿವೆ.

‘ವಾರದಿಂದ ವಾರದ ಅವಧಿಯಲ್ಲಿ ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಮಧ್ಯ ಪ್ರದೇಶ, ದೆಹಲಿ, ಹರಿಯಾಣ ಮತ್ತು ಕರ್ನಾಟಕದಲ್ಲಿ ಗರಿಷ್ಠ ಹೆಚ್ಚಳ ಕಂಡುಬಂದಿದೆ. ಮಹಾರಾಷ್ಟ್ರವೊಂದರಲ್ಲೇ ವಾರದ ಅವಧಿಯಲ್ಲಿ 16,012 ಪ್ರಕರಣಗಳು ದಾಖಲಾಗಿವೆ’ ಎಂದು ಸಚಿವಾಲಯ ತಿಳಿಸಿದೆ.

ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಜತೆ ಕೇಂದ್ರವು ನಿರಂತರ ಸಂಪರ್ಕದಲ್ಲಿದೆ ಎಂದೂ ಸಚಿವಾಲಯ ಹೇಳಿದೆ.

ಪರಿಣಾಮಕಾರಿ ಸೋಂಕು ಪತ್ತೆ ಪರೀಕ್ಷೆ, ಸಪರ್ಕ ಪತ್ತೆ, ಸೋಂಕು ದೃಢಪಟ್ಟವರ ಪ್ರತ್ಯೇಕವಾಸ, ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನು ಆದಷ್ಟು ಬೇಗನೇ ಪತ್ತೆಹಚ್ಚಿ ಕ್ವಾರಂಟೈನ್‌ನಲ್ಲಿರಿಸುವ ಅಗತ್ಯವಿದೆ ಎಂದು ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT