ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನಲ್ಲಿ ಭಾರಿ ಮಳೆ: ರತ್ನಗಿರಿ ಜಿಲ್ಲೆಯಲ್ಲಿ ರೈಲು ಸೇವೆ ಸ್ಥಗಿತ

Last Updated 22 ಜುಲೈ 2021, 7:49 IST
ಅಕ್ಷರ ಗಾತ್ರ

ಮುಂಬೈ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ರೈಲು ಸೇವೆಯನ್ನು ಗುರುವಾರ ಬೆಳಿಗ್ಗೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರತ್ನಾಗಿರಿಯ ಚಿಪ್ಲುನ್ ಮತ್ತು ಕಾಮತೆ ನಿಲ್ದಾಣಗಳ ನಡುವಿನ ವಶಿಷ್ಠ ನದಿ ಸೇತುವೆ ಬಳಿ ನೀರಿನ ಮಟ್ಟವು ಭಾರಿ ಏರಿಕೆಯಾಗಿದೆ.ಇದರಿಂದ ಅಪಾಯದ ಮುನ್ಸೂಚನೆಯಿದ್ದು ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೆ ವಕ್ತಾರರು ತಿಳಿಸಿದ್ದಾರೆ.

‘ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಕೊಂಕಣ ರೈಲ್ವೆ ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ರೋಹಾದಿಂದ ಮಂಗಳೂರು ಸಮೀಪದ ತೋಕೂರುವರೆಗೆ 756 ಕಿ.ಮೀ ಉದ್ದ ಟ್ರ್ಯಾಕ್‌ ಹೊಂದಿದೆ. ಈ ಮಾರ್ಗ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ಮೂರು ರಾಜ್ಯಗಳ ನಡುವೆ ಸಂಪರ್ಕವನ್ನು ಕಲ್ಪಿಸುತ್ತದೆ.

ಭಾರಿ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ಮಣ್ಣು ಕುಸಿತ, ಭೂಕುಸಿತ ಕಂಡು ಬಂದಿದ್ದು, ರೈಲು ಸಂಚಾರಕ್ಕೆ ತೊಡಕು ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT