ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಕರ್ನಾಟಕ ಸಿ.ಎಂ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ

Last Updated 25 ಮಾರ್ಚ್ 2022, 13:07 IST
ಅಕ್ಷರ ಗಾತ್ರ

ಮುಂಬೈ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮಹಾರಾಷ್ಟ್ರ ವಿಧಾನ ಪರಿಷತ್ತು ಶುಕ್ರವಾರ ಸರ್ವಾನುಮತದಿಂದ ಖಂಡನಾ ನಿರ್ಣಯವನ್ನು ಅಂಗೀಕರಿಸಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವು ಇನ್ನು ಮುಂದೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ನೀಡಿರುವ ಹೇಳಿಕೆಯನ್ನು ವಿಧಾನ ಪರಿಷತ್‌ ಸದಸ್ಯರು ವಿರೋಧಿಸಿದ್ದಾರೆ.

ಅಕ್ಕಲಕೋಟೆ ಮತ್ತು ಸೊಲ್ಲಾಪುರದಂತಹ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ನೀಡಲಾಯಿತು. ಆದ್ದರಿಂದ ಬೆಳಗಾವಿ, ಕಾರವಾರ ಮತ್ತು ನೆರೆಯ ಪ್ರದೇಶಗಳನ್ನು ಕರ್ನಾಟಕಕ್ಕೆ ನೀಡಲಾಗಿದೆ ಎಂದು ಬೊಮ್ಮಾಯಿ ಅವರು ನೀಡಿದ ಹೇಳಿಕೆಯನ್ನು ಶಿವಸೇನಾ ಶಾಸಕ ದಿವಾಕರ್‌ ರಾವುತೆ ಅವರು ವಿಧಾನ ಪರಿಷತ್‌ನಲ್ಲಿ ವಿಷಯ ಪ್ರಸ್ತಾಪಿಸಿದರು.

ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಭಾಪತಿ ರಾಮರಾಜೇ ನಾಯ್ಕ್‌ –ನಿಂಬಾಳ್ಕರ್‌, ‘ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳನ್ನು ಖಂಡಿಸುವ ಪ್ರಸ್ತಾವವನ್ನು ನಾನು ಮುಂದಿಡುತ್ತೇನೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದ್ದು, ಪ್ರಕರಣದ ಮೇಲೆ ಪ್ರಭಾವ ಬೀರುವ ಹೇಳಿಕೆ ನೀಡಬಾರದಿತ್ತು’ ಎಂದು ಹೇಳಿದರು.

ಈ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT