ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ: ಮಹಾರಾಷ್ಟ್ರದಲ್ಲಿ ಒಂದೇ ದಿನ 280 ಪ್ರಕರಣ

Last Updated 21 ಮಾರ್ಚ್ 2023, 16:13 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಇಂದು ಕೋವಿಡ್ ದೃಢಪಟ್ಟ 280 ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಮುನ್ಸೂಚನೆ ಸಿಕ್ಕಿದೆ.

ಕಳೆದ ಕೆಲ ದಿನಗಳಿಂದಲೂ ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ತುಸು ಹೆಚ್ಚಳ ಕಂಡುಬರುತ್ತಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 81,40,145ಕ್ಕೆ ಏರಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 7,845 ಸ್ವ್ಯಾಬ್ ಟೆಸ್ಟ್ ಮಾಡಲಾಗಿದ್ದು, ಪುಣೆ ವಲಯದಲ್ಲಿ 133, ಮುಂಬೈನಲ್ಲಿ 101, ನಾಸಿಕ್‌ನಲ್ಲಿ 14 ಮತ್ತು ಕೊಲ್ಲಾಪುರದಲ್ಲಿ 10 ಕೋವಿಡ್ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT