ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಥಾಣೆ: ಕರ್ತವ್ಯ ನಿರತ ಪೊಲೀಸ್ ಪೇದೆಯನ್ನು ಕಚ್ಚಿದ ವ್ಯಕ್ತಿ

Last Updated 6 ಮೇ 2022, 8:35 IST
ಅಕ್ಷರ ಗಾತ್ರ

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಪೊಲೀಸ್ ಪೇದೆಯೊಬ್ಬರಿಗೆ ಕಚ್ಚಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ತಡರಾತ್ರಿ ಪೊಲೀಸ್ ತಂಡವೊಂದು ನಗರದ ನೌಪಾದಾ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ತಂಡವು ಮಧ್ಯರಾತ್ರಿ 12.30ರ ಸುಮಾರಿಗೆ ಗಸ್ತು ತಿರುಗುತ್ತಿದ್ದಾಗ ಈ ಪ್ರದೇಶದಲ್ಲಿ ಜೋರಾದ ಮ್ಯೂಸಿಕ್ ಕೇಳಿಸಿದೆ. ಈ ಸಂದರ್ಭ ಸ್ಥಳಕ್ಕೆ ತೆರಳಿದ ಪೊಲೀಸರು ವಿಚಾರಣೆ ಆರಂಭಿಸಿದ್ದರು. ಈ ಸಂದರ್ಭ ದಿಢೀರ್ ನುಗ್ಗಿ ಬಂದ ಅಮೀರ್ ಸಾಹಿದ್ ಖಾನ್ ಎಂಬ ವ್ಯಕ್ತಿ ಪೊಲೀಸ್ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಪೊಲೀಸ್ ಜೀಪಿನ ಬಳಿಗೆ ಹೋಗಿ ವಿಂಡ್‌ಸ್ಕ್ರೀನ್‌ಗೆ ತಲೆ ಬಡಿದು ಹಾನಿಗೊಳಿಸಿದ್ದಾನೆ. ಈ ವೇಳೆ ಕಾನ್‌ಸ್ಟೆಬಲ್ ಒಬ್ಬರು ಅವನನ್ನು ನಿಯಂತ್ರಿಸಲು ಮುಂದಾದಾಗ, ಆರೋಪಿ ಅವರ ಬೆರಳನ್ನು ಕಚ್ಚಿದ್ದಾನೆ. ಸ್ಥಳಕ್ಕೆ ಬಂದ ಇತರ ಸಿಬ್ಬಂದಿಯನ್ನೂ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT