ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಆಸ್ಪತ್ರೆಗೆ ದಾಖಲು: ಸ್ಥಿತಿ ಗಂಭೀರ ಎಂದ ವಕೀಲ

Last Updated 2 ಮೇ 2022, 14:34 IST
ಅಕ್ಷರ ಗಾತ್ರ

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಎನ್‌ಸಿಪಿ ಮುಖಂಡ, ಮಹಾರಾಷ್ಟ್ರದ ಸಚಿವ ನವಾಬ್‌ ಮಲಿಕ್‌ ಅನಾರೋಗ್ಯಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರ ಮತ್ತು ಭೇದಿಯಿಂದ ಬಳಲುತ್ತಿರುವ ಮಲಿಕ್ ಅವರನ್ನು ಮುಂಬೈಯಲ್ಲಿರುವ ಸರ್ಕಾರಿ ಸ್ವಾಮ್ಯದ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಿತಿ ಗಂಭಿರವಾಗಿದೆ ಎಂದು ಅವರ ವಕೀಲರು ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮಲಿಕ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜೆಜೆ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ನ್ಯಾಯಾಂಗ ಬಂಧನದಲ್ಲಿದ್ದ ಮಲಿಕ್ ಅವರನ್ನು ಆರ್ಥರ್ ರಸ್ತೆಯ ಜೈಲಿನಲ್ಲಿ ಇರಿಸಲಾಗಿತ್ತು. ಆನಾರೋಗ್ಯದ ಕಾರಣ ಜಾಮೀನು ನೀಡಬೇಕೆಂದು ಅವರು ನ್ಯಾಯಾಲಯವನ್ನು ಕೋರಿದ್ದರು. ಆದರೆ, ಅವರ ಮನವಿ ತಿರಸ್ಕೃತಗೊಂಡಿತ್ತು.

ತಮ್ಮ ವಿರುದ್ಧ ಇ.ಡಿ. ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮನವಿ ಮಾಡಿ ಮತ್ತು ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೂ ಮಲಿಕ್ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿಯನ್ನು ಮಾರ್ಚ್ 15ರಂದು ಹೈಕೋರ್ಟ್ ತಿರಸ್ಕರಿಸಿತ್ತು.

ಬಳಿಕ ಸುಪ್ರೀಂ ಕೋರ್ಟ್‌ಗೂ ಅವರು ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಜಾಮೀನು ವಿಚಾರವಾಗಿ ಬಾಂಬೆ ಹೈಕೋರ್ಟ್‌ ನೀಡಿರುವ ತೀರ್ಪಿನ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಏಪ್ರಿಲ್ 22ರಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನವಾಬ್‌ ಮಲಿಕ್‌ ಅವರನ್ನು ಫೆಬ್ರುವರಿ 23ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿತ್ತು.

ಇವನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT