ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಹಾಗೂ ಎನ್‌ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ (62) ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಇ.ಡಿ ಕಚೇರಿಯಲ್ಲಿ ನವಾಬ್ ಮಲಿಕ್ ಅವರನ್ನು ಬೆಳಿಗ್ಗೆ 8 ಗಂಟೆಯಿಂದ
ಐದು ತಾಸು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ನಂತರ ವಿಶೇಷ ಪಿಎಂಎಲ್ಎ ಕೋರ್ಟ್ ಅವರನ್ನು ಮಾರ್ಚ್ 3ರವರೆಗೆ ಇ.ಡಿ ಕಸ್ಟಡಿಗೆ ಒಪ್ಪಿಸಿತು.

‘ಕೆಲವು ಆಸ್ತಿ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮಲಿಕ್ ಅವರ ಮೇಲೆ ಆರೋಪಗಳಿವೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮಲಿಕ್ ಅವರ ಹೇಳಿಕೆ ಯನ್ನು ದಾಖಲಿಸಿಕೊಳ್ಳಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಲಿಕ್ ಅವರ ಬಂಧನ ಮಹಾ ರಾಷ್ಟ್ರ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಎನ್‌ಸಿಪಿ, ಶಿವಸೇನಾ, ಕಾಂಗ್ರೆಸ್ ಪಕ್ಷಗಳು ಕೇಂದ್ರದ ವಿರುದ್ಧ ಕಿಡಿಕಾರಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.