ಸೋಮವಾರ, ಅಕ್ಟೋಬರ್ 18, 2021
22 °C

ಸಾಮೂಹಿಕ ಅತ್ಯಾಚಾರದಿಂದ ನೊಂದು ವಿಷ ಸೇವಿಸಿದ್ದ ಅಪ್ರಾಪ್ತೆ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಸಾಮೂಹಿಕ ಅತ್ಯಾಚಾರದಿಂದ ಮನನೊಂದು ವಿಷ ಸೇವಿಸಿದ್ದ 16 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಮಹಾರಾಷ್ಟ್ರದ ಪರಭಾನಿ ಜಿಲ್ಲೆಯಲ್ಲಿ ಘಟನೆ ನಡೆದಿದೆ.  

ಸೋನೆಪತ್‌ ಎಂಬಲ್ಲಿ ಸೆ. 12ರಂದು ಇಬ್ಬರು ಅಪ್ರಾಪ್ತರು ಸೇರಿ ಮೂವರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು.  ಘಟನೆಯಿಂದ ನೊಂದಿದ್ದ ಸಂತ್ರಸ್ತ ಬಾಲಕಿ ಎರಡು ದಿನಗಳ ನಂತರ ಸೆ. 14ರಂದು ವಿಷ ಸೇವಿಸಿದ್ದಳು.  ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಸೋಮವಾರ ಸಂಜೆ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.  

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲೇ ಸೆ. 18ರಂದು ಸಂತ್ರಸ್ತೆ ಪೊಲೀಸರಿಗೆ ತನ್ನ ಹೇಳಿಕೆ ದಾಖಲಿಸಿದ್ದಾಳೆ. ‘ಅತ್ಯಾಚಾರದ ಪರಿಣಾಮವಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದೆ,‘ ಎಂದು ಆಕೆ ಹೇಳಿದ್ದಾಳೆ. ‌

ಆರೋಪಿಗಳಲ್ಲಿ ಒಬ್ಬಾತ ಸಂತ್ರಸ್ತೆಗೆ ಪರಿಚಿತನಾಗಿದ್ದ. ದೃಷ್ಕೃತ್ಯವೆಸಗಿದ ಮೂವರು ಎರಡು ವರ್ಷಗಳಿಂದ ಆಕೆಯ ಹಿಂದೆ ಬಿದ್ದಿದ್ದರು ಎಂದು ಪೊಲೀಸರು ಹೇಳಿದ್ದಾರೆ. 

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಮೂವರ ವಿರುದ್ಧ ಐಪಿಸಿ, ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು