ಶನಿವಾರ, ಅಕ್ಟೋಬರ್ 23, 2021
20 °C

ಮಹಾರಾಷ್ಟ್ರ: ಕಳ್ಳನೆಂದು ಭಾವಿಸಿ ಯುವಕನ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯಲ್ಲಿ ಯುವಕನೊಬ್ಬನನ್ನು ಕಳ್ಳ ಎಂದು ತಪ್ಪಾಗಿ ಭಾವಿಸಿದ ಜನರು ಆತನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಮಧ್ಯರಾತ್ರಿ 1.30ರ ವೇಳೆ ಈ ಘಟನೆ ನಡೆದಿದೆ.

ಆಟೊ ಚಾಲಕನ ಮಗನಾದ ರಮೇಶ್‌ ಮುರಳಿ ಎಂಬುವರನ್ನು ಕಳ್ಳ ಎಂದು ಭಾವಿಸಿದ್ದಾಗಿ ಆರೋಪಿಯೊಬ್ಬರು ಹೇಳಿದ್ದಾರೆ. ಆತನನ್ನು ಹಿಡಿದು ಕಬ್ಬಿಣದ ಸರಳು ಮತ್ತು ಕೋಲಿನಿಂದ ಹೊಡೆದು ಪರಾರಿಯಾಗಿದ್ದಾಗಿ ಹೇಳಿದ್ದಾರೆ.

ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಆರೋಪಿಗಳಲ್ಲಿ ಕೆಲವರನ್ನು ಪತ್ತೆ ಹಚ್ಚಲಾಗಿದೆ. ಆದರೆ ಈವರೆಗೆ ಯಾರನ್ನೂ ಬಂಧಿಸಿಲ್ಲ. ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ... ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವ ಅಜಯ್‌ ಮಿಶ್ರಾ ಮಗ ಆಶಿಶ್‌ ಮಿಶ್ರಾ ಬಂಧನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು