ಶನಿವಾರ, ಸೆಪ್ಟೆಂಬರ್ 18, 2021
21 °C
ತಾಲಿಯೆ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ: ನಾಪತ್ತೆಯಾದ 31 ಮಂದಿ ಮೃತಪಟ್ಟಿದ್ದಾಗಿ ಘೋಷಣೆ

ಮಹಾರಾಷ್ಟ್ರ: ಮೃತರ ಸಂಖ್ಯೆ 164ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರದಲ್ಲಿ ಮಳೆ ಸಂಬಂಧಿ ಅವಘಡಗಳಿಂದ ಮೃತಪಟ್ಟವರ ಸಂಖ್ಯೆ 164ಕ್ಕೆ ಏರಿದ್ದು, 56ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 2.29 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಭೂಕುಸಿತ ಸಂಭವಿಸಿದ್ದ ರಾಯಗಡದ ತಾಲಿಯೆ ಗ್ರಾಮದಲ್ಲಿ ಸೋಮವಾರ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ನಾಪತ್ತೆಯಾಗಿರುವ 31 ಮಂದಿ ‘ಮೃತಪಟ್ಟಿದ್ದಾರೆ’ ಎಂದು ಘೋಷಿಸಲಾಗಿದೆ ಎಂದು ರಾಯಗಡ ಜಿಲ್ಲಾಧಿಕಾರಿ ನಿಧಿ ಚೌಧರಿ ತಿಳಿಸಿದ್ದಾರೆ. ರಾಯಗಡ ಜಿಲ್ಲೆಯೊಂದರಲ್ಲಿಯೇ 71 ಮಂದಿ ಮೃತಪಟ್ಟಿದ್ದಾರೆ.

ಭಾರಿ ಮಳೆಯಿಂದ, ರಾಯಗಡದ ತಾಲಿಯೆ ಗ್ರಾಮದಲ್ಲಿ ಕಳೆದ ಗುರುವಾರ ಭೂಕುಸಿತ ಉಂಟಾಗಿ ಹಲವು ಮನೆಗಳು ನೆಲಸಮವಾಗಿದ್ದವು. ‘ಕಾಣೆಯಾದವರ ಸಂಬಂಧಿಕರು, ಶೋಧ ನಿಲ್ಲಿಸುವಂತೆ ನಿನ್ನೆಯಿಂದಲೇ ಹೇಳುತ್ತಿದ್ದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಭಿಪ್ರಾಯ ಪಡೆದು ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿರುವ ಕೊಲ್ಲಾಪುರ, ಸಾಂಗ್ಲಿ ಹಾಗೂ ಸಾತಾರ ಜಿಲ್ಲೆಗಳಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಮುಂದಾಗಿದ್ದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ಪ್ರತಿಕೂಲ ಹವಾಮಾನದಿಂದಾಗಿ ಸಮೀಕ್ಷೆಯನ್ನು ಸೋಮವಾರ ಕೈಬಿಟ್ಟಿದ್ದಾರೆ.

ರಾಜಸ್ಥಾನ ಹಾಗೂ ಗುಜರಾತ್‌ನ ಹಲವೆಡೆ ಭಾರಿ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು