ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದ ವಿರಾರ್‌ ಆಸ್ಪತ್ರೆ ದುರಂತ: ವೈದ್ಯರ ವಿರುದ್ಧ ಪ್ರಕರಣ

Last Updated 24 ಏಪ್ರಿಲ್ 2021, 3:33 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂದಿಸಿ ಅಲ್ಲಿನ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಉದ್ದೇಶಿತವಲ್ಲದ ಹತ್ಯೆ), 337 ಮತ್ತು 338 (ಮಾನವ ಜೀವಕ್ಕೆ ಅಪಾಯ ಉಂಟುಮಾಡುವಂಥ ಅಥವಾ ನಿರ್ಲಕ್ಷ್ಯದ ಕೃತ್ಯ) ಹಾಗೂ 38ರ (ಸಾಮಾನ್ಯ ಉದ್ದೇಶದಲ್ಲಿ ಹಲವರು ಎಸಗಿರುವ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಿರಾರ್‌ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಗೆ ಸಂಭವಿಸಿದ್ದ ಅಗ್ನಿ ದುರಂತದಲ್ಲಿ 15 ಮಂದಿ ಮೃತಪಟ್ಟಿದ್ದರು.

ದುರಂತದಲ್ಲಿ ಮೃತಪಟ್ಟ ಕೋವಿಡ್ ರೋಗಿಗಳ ಪ್ರತಿ ಕುಟುಂಬಕ್ಕೆ ₹5 ಲಕ್ಷ ಹಾಗೂ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ತಲಾ ₹1 ಲಕ್ಷ ಪರಿಹಾರ ನೀಡುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT