ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಪ್ರಕರಣ ಹೋಲುವ ಮುಂಬೈ ಅತ್ಯಾಚಾರ: ಸಂತ್ರಸ್ತೆಯ ಸ್ಥಿತಿ ಮತ್ತಷ್ಟು ಗಂಭೀರ

Last Updated 11 ಸೆಪ್ಟೆಂಬರ್ 2021, 6:23 IST
ಅಕ್ಷರ ಗಾತ್ರ

ಮುಂಬೈ: ಇಲ್ಲಿನ ಸಾಕಿ ನಾಕಾ ಪ್ರದೇಶದಲ್ಲಿ ಭೀಕರವಾಗಿ ಅತ್ಯಾಚಾರಕ್ಕೆ ಒಳಗಾಗಿರುವ ಮಹಿಳೆಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು 'ಡೆಕ್ಕನ್‌ ಹೆರಾಲ್ಡ್‌' ವರದಿ ಮಾಡಿದೆ.

ಘಾಟ್ಕೋಪರ್‌ನಲ್ಲಿರುವ ರಾಜವಾಡಿ ಆಸ್ಪತ್ರೆಗೆ ಸಂತ್ರಸ್ತೆಯನ್ನು ದಾಖಲಿಸಲಾಗಿದ್ದು, ಆಕೆಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಆಸ್ಪತ್ರೆಗೆ ಭೇಟಿ ನೀಡಿರುವ ಮುಂಬೈ ಮಹಾನಗರ ಪಾಲಿಕೆಯ ಮೇಯರ್‌ ಕಿಶೋರಿ ಪಡ್ನೇಕರ್, 'ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಚಿಕಿತ್ಸೆ ಮುಂದುವರೆದಿದೆ' ಎಂದು ಹೇಳಿದ್ದಾರೆ.

ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 34 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಯೊಬ್ಬ ಶುಕ್ರವಾರ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.

ಚಲಿಸುತ್ತಿದ್ದ ಟೆಂಪೊವೊಂದರಲ್ಲಿ ಈ ಅತ್ಯಾಚಾರ ನಡೆದಿದೆ. ನಿರ್ಭಯಾ ಪ್ರಕರಣದಂತೆ ಈ ಪ್ರಕರಣದಲ್ಲೂ ಕ್ರೌರ್ಯದ ಪರಾಕಾಷ್ಠೆಯನ್ನು ಮೆರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿಯು ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ಸಲಾಕೆ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾಗಿ ತಿಳಿದುಬಂದಿದೆ.

ಈ ಕೃತ್ಯವು ಒಬ್ಬ ವ್ಯಕ್ತಿಯಿಂದ ಎಸಗಲ್ಪಟ್ಟಿದೆಯೇ ಅಥವಾ ಇದು ಸಾಮೂಹಿಕ ಅತ್ಯಾಚಾರವೇ ಎಂಬುದು ತನಿಖೆಯಿಂದ ಹೊರಬರಬೇಕಿದೆ.

ಆರೋಪಿಯ ವಿರುದ್ಧ ಸೆಕ್ಷನ್ 307, 376, 323, ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT