ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔರಂಗಾಬಾದ್‌ ಜಿಲ್ಲೆಯಲ್ಲಿ ಲಸಿಕೆ ಪಡೆಯದಿದ್ದರೆ ಪಡಿತರ, ಗ್ಯಾಸ್, ಪೆಟ್ರೋಲ್ ಇಲ್ಲ

Last Updated 10 ನವೆಂಬರ್ 2021, 11:08 IST
ಅಕ್ಷರ ಗಾತ್ರ

ಔರಂಗಾಬಾದ್‌: ಪಡಿತರ, ಅಡುಗೆ ಅನಿಲ ಹಾಗೂ ಪೆಟ್ರೋಲ್‌ ಪಡೆಯಲುಕನಿಷ್ಠ ಒಂದು ಡೋಸ್‌ ಆದರೂ ಕೋವಿಡ್‌ –19 ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲಾಡಳಿತ ಆದೇಶ ಮಾಡಿದೆ.

ರಾಜ್ಯದಲ್ಲಿ 36 ಜಿಲ್ಲೆಗಳ ಪೈಕಿ ಕೋವಿಡ್ ಲಸಿಕೆ ಹಾಕಿಸುವಿಕೆಯಲ್ಲಿ ಔರಂಗಾಬಾದ್‌ 26ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಲಸಿಕೆಗೆ ಅರ್ಹವಿರುವ 74ರಷ್ಟು ಜನರಲ್ಲಿ ಈವರೆಗೆ ಶೇ 55ರಷ್ಟು ಜನರಿಗೆ ಮಾತ್ರ ಲಸಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

’ಮಂಗಳವಾರ ರಾತ್ರಿ ಹೊರಡಿಸಿದ ಆದೇಶದಲ್ಲಿ ಔರಂಗಾಬಾದ್‌ ಜಿಲ್ಲಾಧಿಕಾರಿ ಸುನಿಲ್‌ ಚವಾಣ್ ಅವರು ಗ್ರಾಹಕರ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಪರಿಶೀಲಿಸುವಂತೆ ನ್ಯಾಯಬೆಲೆ ಅಂಗಡಿಗಳು, ಗ್ಯಾಸ್ ಏಜೆನ್ಸಿಗಳು ಮತ್ತು ಪೆಟ್ರೋಲ್ ಪಂಪ್‌ಗಳ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ‘ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದೇಶ ಪಾಲಿಸದಿದ್ದರೆ ಸಂಬಂಧಿಸಿದವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು, ಅಲ್ಲದೆ, ಕನಿಷ್ಠ ಒಂದು ಡೋಸ್‌ ಲಸಿಕೆ ಹಾಕಿಸಿಕೊಳ್ಳದವರಿಗೆ ಜಿಲ್ಲೆಯ ಯಾವುದೇ ಐತಿಹಾಸಿಕ ಸ್ಥಳಗಳು ಮತ್ತು ಪಾರಂಪಾರಿಕ ತಾಣಗಳಿಗೆ ಪ್ರವೇಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT