ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಪೊಲೀಸ್‌ ಇಲಾಖೆಯ 18 ಸಾವಿರ ಹುದ್ದೆಗಳಿಗೆ 11 ಲಕ್ಷ ಅರ್ಜಿ!

Last Updated 29 ನವೆಂಬರ್ 2022, 10:55 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮಹಾರಾಷ್ಟ್ರ ರಾಜ್ಯ ಮೀಸಲು ಪೊಲೀಸ್ ಪಡೆಯ 18,331 ಕಾನ್‌ಸ್ಟೆಬಲ್‌, ಚಾಲಕ ಹಾಗೂ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ 11 ಲಕ್ಷಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಅಸಂಖ್ಯಾತ ಆಕಾಂಕ್ಷಿಗಳು ಒಂದೇ ಬಾರಿಗೆ ಅರ್ಜಿ ಸಲ್ಲಿಸಲು ಯತ್ನಿಸುತ್ತಿರುವ ಕಾರಣ ಸರ್ಕಾರಿ ವೆಬ್‌ಪೋರ್ಟಲ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಸದ್ಯ ಅದನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ನ.9ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಬುಧವಾರ (ನ.30) ಕೊನೆಯ ದಿನವಾಗಿದೆ. ಸೋಮವಾರ ಮಧ್ಯಾಹ್ನದ ವರೆಗೆ 10.74 ಲಕ್ಷ ಅರ್ಜಿ ಸಲ್ಲಿಕೆಯಾಗಿವೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT