ಸೋಮವಾರ, ಆಗಸ್ಟ್ 15, 2022
27 °C

'ಮಹಾ' ರಾಜಕೀಯ ಬಿಕ್ಕಟ್ಟು: ಸಮಯ ಕಳೆಯಲು ಚೆಸ್ ಆಡುತ್ತಿದ್ದಾರೆ ಬಂಡಾಯ ಶಾಸಕರು

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ಗುವಾಹಟಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿರುವ ಬಂಡಾಯ ಶಾಸಕರು ಗುವಾಹಟಿಯ ಐಷಾರಾಮಿ ಹೋಟೆಲ್‌ನಲ್ಲಿ ಬೀಡುಬಿಟ್ಟಿದ್ದು, ಸಮಯ ಕಳೆಯಲು ಒಳಾಂಗಣ ಕ್ರೀಡೆಗಳನ್ನು ಆಡುತ್ತಿದ್ದಾರೆ.

'ಹಲವು ಸಭೆಗಳನ್ನು ನಡೆಸುತ್ತಿರುವುದನ್ನು ಹೊರತುಪಡಿಸಿ, ಗುವಾಹಟಿಯಲ್ಲಿ ಬೇರೆ ಯಾವುದೇ ಗಂಭೀರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿಲ್ಲ. ಸಮಯ ಕಳೆಯಲು ಅವರು (ಬಂಡಾಯ ಶಾಸಕರು) ಚೆಸ್‌, ಲುಡೊ ಸೇರಿದಂತೆ ಒಳಾಂಗಣ ಆಟಗಳನ್ನು ಆಡುತ್ತಿದ್ದಾರೆ' ಎಂದು ಶಾಸಕರೊಂದಿಗೆ ಸಂಪರ್ಕದಲ್ಲಿರುವ ವ್ಯಕ್ತಿಯೊಬ್ಬರು ಹೆಸರು ಬಹಿರಂಗಪಡಿಸದಂತೆ ಸೂಚಿಸಿ ನೀಡಿದ್ದಾರೆ.

ಗುಂಪಿನ ನಾಯಕ ಏಕನಾಥ ಶಿಂಧೆ ಅವರು ಶಾಸಕರಿಗೆ ಹೋಟೆಲ್‌ನಿಂದ ಹೊರಗೆ ಹೋಗದಂತೆ ನೋಡಿಕೊಳ್ಳುತ್ತಿದ್ದಾರೆ.

ಅಸ್ಸಾಂನ ಬಿಜೆಪಿ ಶಾಸಕರು, ನಾಯಕರು ಹಾಗೂ ಸಚಿವರು ನಿಯಮಿತವಾಗಿ ಹೋಟೆಲ್‌ಗೆ ಭೇಟಿ ನೀಡಿ, ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಶಿವಸೇನಾದ ಕನಿಷ್ಠ 38 ಶಾಸಕರು ಮತ್ತು 10 ಪಕ್ಷೇತರರು ಏಕನಾಥ ಶಿಂಧೆ ನೇತೃತ್ವದಲ್ಲಿ ಅಸ್ಸಾಂನ ಗುವಾಹಟಿಯ ಹೋಟೆಲ್‌ವೊಂದರಲ್ಲಿ ಬೀಡುಬಿಟ್ಟಿದ್ದಾರೆ. ಇದರಿಂದಾಗಿ ಶಿವಸೇನಾ, ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಮೈತ್ರಿಕೂಟದ 'ಮಹಾ ವಿಕಾಸ ಆಘಾಡಿ' ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ.

ಇವನ್ನೂ ಓದಿತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು