ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬಗ್ಗೆ ನನಗೆ ಹೆಮ್ಮೆ ಇದೆ: ಸುಪ್ರಿಯಾ ಸುಳೆ 

ಅಕ್ಷರ ಗಾತ್ರ

ಮುಂಬೈ: ಗುವಾಹಟಿಯಲ್ಲಿ ಬೀಡು ಬಿಟ್ಟಿರುವ ಶಿವಸೇನಾ ಬಂಡಾಯ ಶಾಸಕರನ್ನು ಮಾತುಕತೆಗೆ ಬರುವಂತೆ ಕರೆ ನೀಡಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.

‘ಇಂದು ಬಾಳಾಸಾಹೇಬ್ ಠಾಕ್ರೆ ಅವರ ಅನುಪಸ್ಥಿತಿಯಲ್ಲಿ ಅವರು (ಉದ್ಧವ್) ತಮ್ಮ ಶಾಸಕರಿಗೆ ಸೂಕ್ಷ್ಮವಾಗಿ ಮನವಿ ಮಾಡಿರುವುದು ಮೆಚ್ಚುವಂತದ್ದು’ ಎಂದು ಸುಪ್ರಿಯಾ ತಿಳಿಸಿದ್ದಾರೆ.

‘ನಾನು ಜ್ಯೋತಿಷಿಯಲ್ಲ. ಆದರೆ, ಕುಟುಂಬದ ಯಾರಾದರೂ ಬಿಟ್ಟು ಹೋಗಿದ್ದರೆ, ಅವರನ್ನು ಮರಳಿ ಕರೆತರಲು ಇಡೀ ಕುಟುಂಬ ಪ್ರಯತ್ನಿಸಬೇಕು ಎಂದು ನನ್ನ ಭಾವನೆ’ ಎಂದಿದ್ದಾರೆ.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ಶಿವಸೇನಾ ಅಧ್ಯಕ್ಷ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪಕ್ಷದ ಬಂಡಾಯ ಶಾಸಕರನ್ನು ಮುಂಬೈಗೆ ಮರಳುವಂತೆ ಮಂಗಳವಾರ ಪತ್ರ ಬರೆದಿದ್ದಾರೆ.

ಶಿವಸೇನಾ ಬಂಡಾಯ ನಾಯಕ ಏಕನಾಥ ಶಿಂಧೆ ನೇತೃತ್ವದಲ್ಲಿ ಪಕ್ಷೇತರ ಶಾಸಕರೂ ಸೇರಿದಂತೆ ಸುಮಾರು 50 ಮಂದಿ ಶಾಸಕರು ಗುವಾಹಟಿಯ ರ್‍ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಬೀಡು ಬಿಟ್ಟಿದ್ದಾರೆ.

ಏಕನಾಥ ಶಿಂಧೆ ಅವರ ನಡೆ ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT