ಸೋಮವಾರ, ಆಗಸ್ಟ್ 8, 2022
23 °C

ಪ್ರಜಾತಂತ್ರ ಮಾರಾಟಕ್ಕಿದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಿದೆ: ಕೆ.ಸಿ.ವೇಣುಗೋಪಾಲ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೊಚ್ಚಿ: ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ವಿರುದ್ಧ ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ ವಾಗ್ದಾಳಿ ನಡೆಸಿದ್ದಾರೆ.

ಕೇರಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಪ್ರಜಾಪ್ರಭುತ್ವ ಮಾರಾಟಕ್ಕಿದೆ ಎಂಬುದನ್ನು ಬಿಜೆಪಿ  ಸ್ಪಷ್ಟಪಡಿಸಿದೆ. ಯಾರು ಬೇಕಾದರೂ ಬಂದು ಹಣ ತೆಗೆದುಕೊಂಡು ಬಿಜೆಪಿ ಸೇರಬಹುದು. ಇದು ಭಾರತದ ಪ್ರಜಾಪ್ರಭುತ್ವದ ಭವಿಷ್ಯ. ಆದರೆ, ಭಾರತದ ಜನರು ಇದರ ವಿರುದ್ಧ ಹೋರಾಡಲಿದ್ದಾರೆ’ ಎಂದು ತಿಳಿಸಿದ್ದಾರೆ.
 
ಶಿವಸೇನಾ ಬಂಡಾಯ ಬಣ ಹಾಗೂ ಬಿಜೆಪಿ ಮೈತ್ರಿ ಸರ್ಕಾರವು ಜುಲೈ 4 ರಂದು ವಿಧಾನಸಭೆ ಅಧಿವೇಶನದಲ್ಲಿ ವಿಶ್ವಾಸ ಮತಯಾಚನೆ ಮಾಡಲಿದೆ.

ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ನರ್ವೇಕರ್‌ ಆಯ್ಕೆಯಾಗಿದ್ದು, ಸೋಮವಾರದ ವಿಶ್ವಾಸ ಮತಕ್ಕೂ ಮೊದಲು ಏಕನಾಥ ಶಿಂಧೆ–ಬಿಜೆಪಿ ದೋಸ್ತಿಗೆ ಮೊದಲ ಗೆಲುವು ಸಿಕ್ಕಂತಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು