ಗೊಂಡಿಯಾ: ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ 30 ವರ್ಷದ ವ್ಯಕ್ತಿಗೆ 29 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಶಬ್ಬೀರ್ ಅಹ್ಮದ್ ಆಟಿ ಮಂಗಳವಾರ ಆರೋಪಿ ಲಂಕೇಶ್ ಅಲಿಯಾಸ್ ಮುಖೇಶ್‌ಕುಮಾರ್ ವಾಮನರಾವ್ ಮೆಶ್ರಾಮ್‌ನನ್ನು ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ದೋಷಿ ಎಂದು ಘೋಷಿಸಿದ್ದಾರೆ.
ಆರೋಪಿಗೆ 29 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.14 ಲಕ್ಷ ದಂಡ ವಿಧಿಸಲಾಗಿದೆ. ಆರೋಪಿಯು ನಾಟಿ ವೈದ್ಯನಾಗಿದ್ದು, 17 ವರ್ಷದ ಅಪ್ರಾಪ್ತೆಯ ಎದೆಯ ಕಾಯಿಲೆಯನ್ನು ಗುಣಪಡಿಸುವ ನೆಪದಲ್ಲಿ ಮಾರ್ಚ್ 27 ಮತ್ತು ಏಪ್ರಿಲ್ 5, 2019 ರಂದು ಲೈಂಗಿಕವಾಗಿ ಬಳಸಿಕೊಂಡಿದ್ದನು.
ಸಂತ್ರಸ್ತೆಯ ಅಜ್ಜಿ ತನ್ನ ಮೊಮ್ಮಗಳ ಎದೆನೋವು ಗುಣಪಡಿಸಲು ಮೆಶ್ರಾಮ್ ಅವರನ್ನು ಸಂಪರ್ಕಿಸಿದ್ದರು. ನಂತರ ಆರೋಪಿಯು ಬಾಲಕಿಯ ಮನೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ಸಂತ್ರಸ್ತೆಯನ್ನು ಲೈಂಗಿಕವಾಗಿ ಶೋಷಿಸಿದ್ದಾನೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.