ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ರೈಲು ನಿಲ್ದಾಣದ ಸ್ಕೈವಾಕ್‌ ಕುಸಿತ– 13 ಮಂದಿಗೆ ಗಾಯ

Last Updated 27 ನವೆಂಬರ್ 2022, 16:01 IST
ಅಕ್ಷರ ಗಾತ್ರ

ನಾಗ್ಪುರ : ರೈಲ್ವೆ ಹಳಿ ಮೇಲಿನ ಸ್ಕೈ ವಾಕ್‌ ಕುಸಿದು 13 ಜನರು ಗಾಯಗೊಂಡಿರುವ ಘಟನೆಯು ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಬಾಲ್ಹಾರ್‌ಶಾ ರೈಲು ನಿಲ್ದಾಣದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುಣೆಗೆ ಹೊರಟಿದ್ದ ರೈಲು ಹತ್ತುವ ಸಲುವಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಸ್ಕೈವಾಕ್‌ ಬಳಸಿ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಗಾಯಗೊಂಡವರಿಗೆ ಬಳ್ಳಾಪುರ ಗ್ರಾಮೀಣ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವರನ್ನು ಚಂದ್ರಾಪುರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT