ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಪ್ರವಾಹ: ಮೃತರ ಸಂಖ್ಯೆ 76ಕ್ಕೆ ಏರಿಕೆ, ಹಲವರು ನಾಪತ್ತೆ

Last Updated 24 ಜುಲೈ 2021, 9:48 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಸಂಭವಿಸಿದ್ದು, ಇದರಲ್ಲಿ 76 ಮಂದಿ ಮೃತಪಟ್ಟಿದ್ದಾರೆ. 38 ಜನರಿಗೆ ಗಾಯಗಳಾಗಿವೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.

ಪ್ರವಾಹದಲ್ಲಿ 30 ಮಂದಿ ನಾಪತ್ತೆಯಾಗಿದ್ದಾರೆ. ರಾಯಗಡ, ರತ್ನಾಗಿರಿ, ಕೊಂಕಣ ಪ್ರದೇಶ, ಕೊಲ್ಹಾಪುರ ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಅತಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ 90,000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದೂ ಮಾಹಿತಿ ನೀಡಲಾಗಿದೆ.

ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ರಾಯಗಡ ಜಿಲ್ಲೆಯ ಮಹಾದ್‌ ಪಟ್ಟಣ ಮತ್ತು ತಾಲಿಯಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ತಾಲಿಯಾ ಗ್ರಾಮದಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂ ಕುಸಿತದಲ್ಲಿ 39 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT