ಶಿವಸೇನೆಯು ಹಿಂದುತ್ವದ ಮೂಲ ಶಾಲೆ: ಸಂಜಯ್ ರಾವುತ್ ಪ್ರತಿಪಾದನೆ

ಮುಂಬೈ: ಮಸೀದಿಗಳ ಮೇಲಿರುವ ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಬೆಳವಣಿಗಳ ಕುರಿತು ಶಿವಸೇನಾ ನಾಯಕ ಸಂಜಯ್ ರಾವುತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಅಕ್ರಮ ಧ್ವನಿವರ್ಧಕಗಳನ್ನು ಅಳವಡಿಸಿಲ್ಲ ಎಂದು ರಾವುತ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ.
‘ಮಹಾರಾಷ್ಟ್ರದಲ್ಲಿ ಶಾಂತಿ ನೆಲೆಸಿದ್ದು, ಯಾವುದೇ ಪ್ರತಿಭಟನೆ ನಡೆಯುತ್ತಿಲ್ಲ. ರಾಜ್ಯದಲ್ಲಿ ಅಕ್ರಮ ಧ್ವನಿವರ್ಧಕಗಳನ್ನು ಅಳವಡಿಸಿಲ್ಲ. ಬಾಳಾ ಸಾಹೇಬ್ ಠಾಕ್ರೆ ಹಾಗೂ ವೀರ ಸಾವರ್ಕರ್ ಅವರು ದೇಶಕ್ಕೆ ಹಿಂದುತ್ವದ ಪಾಠ ಮಾಡಿದ್ದಾರೆ. ಶಿವಸೇನೆಯು ಹಿಂದುತ್ವದ ಮೂಲ ಶಾಲೆಯಾಗಿದೆ’ ಎಂದು ರಾವುತ್ ಪ್ರತಿಪಾದಿಸಿದ್ದಾರೆ.
ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ತೆಗೆಯುವಂತೆ ಆಗ್ರಹಿಸಿದ್ದ ರಾಜ್ ಠಾಕ್ರೆ, ಅದಕ್ಕೆ ಮೇ 3 ಕೊನೆಯ ದಿನವೆಂದು ಸಾರಿದ್ದರು. ಅದು ಸಾಧ್ಯವಾಗದಿದ್ದರೆ, ಮಸೀದಿಗಳ ಎದುರು ಹನುಮಾನ್ ಚಾಲೀಸಾ ಪಠಣ ಆರಂಭಿಸುವುದಾಗಿ ಘೋಷಿಸಿದ್ದರು. ರಾಜ್ ಠಾಕ್ರೆ ಅವರ ವಿರುದ್ಧ ಔರಂಗಾಬಾದ್ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.