ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ ಸೋಂಕಿನಿಂದ 3,998 ಮಂದಿ ಸಾವು

ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 42,015 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 3,998 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,12,16,337 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,18,480 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 3,03,90,687 ಮಂದಿ ಗುಣಮುಖರಾಗಿದ್ದು, ಸದ್ಯ ದೇಶದಲ್ಲಿ 4,07,170 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 1,26,894, ಮಹಾರಾಷ್ಟ್ರದಲ್ಲಿ 97,932, ತಮಿಳುನಾಡಿನಲ್ಲಿ 26,717, ಕರ್ನಾಟಕದಲ್ಲಿ 26,279, ಆಂಧ್ರಪ್ರದೇಶದಲ್ಲಿ 23,843 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಇರುವರೆಗೆ 41,54,72,455 ಡೋಸ್‌ ಕೋವಿಡ್‌ ಲಸಿಕೆಯನ್ನು ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT