ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ 311 ಮಂದಿಗೆ ಕೋವಿಡ್; ಸಕ್ರಿಯ ಪ್ರಕರಣ ಏರಿಕೆ

Last Updated 20 ಮೇ 2022, 15:45 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್‌–19 ದೃಢಪಟ್ಟ 311 ಹೊಸ ಪ್ರಕರಣಗಳು ಶುಕ್ರವಾರ ವರದಿಯಾಗಿವೆ. ಸೋಂಕಿನಿಂದಾಗಿ ಯಾರೊಬ್ಬರೂ ಮೃತಪಟ್ಟಿಲ್ಲ. ಆದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1,761ಕ್ಕೆ ಏರಿಕೆಯಾಗಿವೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ರಾಜಧಾನಿ ಮುಂಬೈ ಒಂದರಲ್ಲೇ ಕಳೆದ 24 ಗಂಟೆಗಳಲ್ಲಿ 231 ಪ್ರಕರಣಗಳು ಪತ್ತೆಯಾಗಿವೆ.

ಒಟ್ಟಾರೆ, ರಾಜ್ಯದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ78,82,169ಕ್ಕೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಹೀಗಾಗಿ, ಮೃತರ ಸಂಖ್ಯೆ1,47,856ರಷ್ಟೇ ಇದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಗುರುವಾರ ಒಟ್ಟು 316 ಪ್ರಕಣಗಳು ವರದಿಯಾಗಿದ್ದರೂ, ಕೋವಿಡ್‌ನಿಂದಾಗಿ ಮೃತಪಟ್ಟ ಒಂದೂ ಪ್ರಕರಣ ಪತ್ತೆಯಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT