ಬುಧವಾರ, ಏಪ್ರಿಲ್ 14, 2021
31 °C

ಮಹಾರಾಷ್ಟ್ರ: ಒಂದೇ ದಿನ 11 ಸಾವಿರ ಕೋವಿಡ್‌ ಪ್ರಕರಣಗಳು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 11,141 ಕೋವಿಡ್‌–19 ಪ್ರಕರಣಗಳು ಪತ್ತೆಯಾಗಿದ್ದು, 38 ಮಂದಿ ಸಾವಿಗೀಡಾಗಿದ್ದಾರೆ.

ಶುಕ್ರವಾರ ಮತ್ತು ಶನಿವಾರ ಕ್ರಮವಾಗಿ 10,216 ಮತ್ತು 10,187 ಪ್ರಕರಣಗಳು ಪತ್ತೆಯಾಗಿದ್ದವು. ಭಾನುವಾರ ಮುಂಬೈ ನಗರವೊಂದರಲ್ಲೇ 1,361 ಪ್ರಕರಣಗಳೂ ಪತ್ತೆಯಾಗಿವೆ. ರಾಜ್ಯದಲ್ಲಿ ಪ್ರಸ್ತುತ 4.39 ಲಕ್ಷ ಮಂದಿ ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. 4,650 ಮಂದಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್‌–19 ಪ್ರಕರಣಗಳನ್ನು ನಿಯಂತ್ರಿಸುವ ಬಗ್ಗೆ ಚರ್ಚಿಸಲಾಯಿತು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು