ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಡಿಗೆ ಹೊರಟಿದ್ದ ಬಸ್‌ ಅಪಘಾತ: 7 ಮಹಿಳೆಯರೂ ಸೇರಿ 10 ಮಂದಿ ದುರ್ಮರಣ

Last Updated 13 ಜನವರಿ 2023, 4:44 IST
ಅಕ್ಷರ ಗಾತ್ರ

ನಾಸಿಕ್‌: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಸ್ಸೊಂದು ಅತಿ ವೇಗದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕನಿಷ್ಠ ಹತ್ತು ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಥಾಣೆ ಜಿಲ್ಲೆಯ ಅಂಬರನಾಥದಿಂದ ಹೊರಟಿದ್ದ ಖಾಸಗಿ ಐಷಾರಾಮಿ ಬಸ್ ಅಹಮದ್‌ನಗರ ಜಿಲ್ಲೆಯ ಶಿರಡಿಗೆ ಹೋಗುತ್ತಿತ್ತು ಎಂದು ಅವರು ಹೇಳಿದರು.

ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ನಾಸಿಕ್‌ನ ಸಿನ್ನಾರ್ ತೆಹಸಿಲ್‌ನ ಪಥರೆ ಶಿವಾರ್ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ ಏಳು ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಮತ್ತು ಒಬ್ಬ ಪುರುಷ ಸೇರಿದ್ದಾರೆ. ಗಾಯಾಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆ ಮತ್ತು ಸಿನ್ನಾರ್‌ನಲ್ಲಿರುವ ಯಶವಂತ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT