ಮಂಗಳವಾರ, ಜನವರಿ 31, 2023
27 °C

ಉತ್ತರ ಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷದ ನಾಯಕನಿಗೆ 'ಎಐಎಂಐಎಂ' ಸೇರಲು ಆಹ್ವಾನ

ಪಿಟಿಐ Updated:

ಅಕ್ಷರ ಗಾತ್ರ : | |

ಔರಂಗಾಬಾದ್: ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷಕ್ಕೆ ಸೇರಲು ಸಮಾಜವಾದಿ ಪಕ್ಷದ ಅಬು ಅಸಿಮ್ ಅಜ್ಮಿ ಅವರನ್ನು ಔರಂಗಾಬಾದ್ ಸಂಸದ ಇಮ್ತಿಯಾಜ್ ಜಲೀಲ್ 'ಆಹ್ವಾನಿಸಿದ್ದಾರೆ'.

ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಎಐಎಂಐಎಂ ನಿರ್ಧಾರದ ಬಗ್ಗೆ ಸಮಾಜವಾದಿ ಪಕ್ಷದ ಮುಖಂಡ ಅಬು ಅಸಿಮ್ ಅಜ್ಮಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಆಲ್ ಇಂಡಿಯಾ ಮಜಿಲಿಸ್-ಇ-ಇತ್ಹೇದುಲ್‌ ಮುಸ್ಲೀಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಇತ್ತೀಚೆಗಷ್ಟೇ 2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿಯೂ 100 ಸ್ಥಾನಗಳಿಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಅಲ್ಲದೆ ಓಂ ಪ್ರಕಾಶ್ ರಾಜ್‌ಭರ್ ನೇತೃತ್ವದ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಮತ್ತು ಭಾಗಿದಾರಿ ಸಂಕಲ್ಪ ಮೋರ್ಚಾದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದ್ದರು.

ಓವೈಸಿ ಅವರ ಘೋಷಣೆಗೆ ಪ್ರತಿಕ್ರಿಯಿಸಿದ ಎಸ್‌ಪಿ ಮಹಾರಾಷ್ಟ್ರ ಘಟಕದ ಮುಖ್ಯಸ್ಥ ಅಬು ಅಸಿಮ್ ಅಜ್ಮಿ, ಎಐಎಂಐಎಂನ ಈ ಕ್ರಮವು ಜಾತ್ಯತೀತ ಮತಗಳನ್ನು ವಿಭಜಿಸುವುದರಲ್ಲಿ ಕೊನೆಗೊಳ್ಳುತ್ತದೆ ಮತ್ತು ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಾಗುವುದಿಲ್ಲ. ಉತ್ತರ ಪ್ರದೇಶದಲ್ಲಿ 100 ಸ್ಥಾನಗಳಿಗೆ ಸ್ಪರ್ಧಿಸಲು ನಿರ್ಧರಿಸುವ ಮೂಲಕ ಮುಸ್ಲಿಮರು ಮತ್ತು ಜಾತ್ಯತೀತ ಜನರ ಸಲಹೆಯನ್ನು ಎಐಎಂಐಎಂ ನಿರ್ಲಕ್ಷಿಸುತ್ತಿದೆ ಎಂದು ಟ್ವೀಟ್ ಮಾಡಿದ್ದರು.

ಅಜ್ಮಿ ಅವರ ಈ ಹೇಳಿಕೆಗೆ ತಿರುಗೇಟು ನೀಡಿರುವ ಮಹಾರಾಷ್ಟ್ರ ಎಐಎಂಐಎಂ ಘಟಕದ ಮುಖ್ಯಸ್ಥ ಜಲೀಲ್, "ನಾನು ಅಬು ಅಸಿಮ್ ಅಜ್ಮಿ ಅವರನ್ನು ಎಐಎಂಐಎಂಗೆ ಸೇರಲು ಆಹ್ವಾನಿಸುತ್ತೇನೆ. ಆಗ ನಾವು ಕಾಂಗ್ರೆಸ್, ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳಂತ ಪಕ್ಷಗಳ ವಿರುದ್ಧ ಹೋರಾಡೋಣ" ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು