ಶುಕ್ರವಾರ, ಡಿಸೆಂಬರ್ 3, 2021
20 °C

ಮಹಾರಾಷ್ಟ್ರ: ಆಕ್ಷೇಪಾರ್ಹ ಪೋಸ್ಟ್‌–ಕಲ್ಲು ತೂರಾಟ, ನಾಲ್ವರು ಪೊಲೀಸರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಔರಂಗಾಬಾದ್‌: ಮೊಘಲ್‌ ಚಕ್ರವರ್ತಿ ಔರಂಗಜೇಬ್‌ ವಿರುದ್ಧ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಕಿರುವುದನ್ನು ಖಂಡಿಸಿ 150ಕ್ಕೂ ಹೆಚ್ಚು ಜನರ ಉದ್ರಿಕ್ತ ಗುಂಪು ಮಹಾರಾಷ್ಟ್ರದ ಉಸ್ಮಾನಾಬಾದ್‌ ನಗರದ ರಸ್ತೆಯಲ್ಲಿ ವಾಹನಗಳು ಮತ್ತು ಹೋರ್ಡಿಂಗ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.   

ವಿಜಯ್‌ ಚೌಕ್‌ ಪ್ರದೇಶದಲ್ಲಿ ಮಂಗಳವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ಉದ್ರಿಕ್ತ ಗುಂಪನ್ನು ತಡೆಯಲು ಯತ್ನಿಸುವಾಗ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.  

‘ವಿಜಯ್‌ ಚೌಕ್‌ ಪ್ರದೇಶದಲ್ಲಿ ಒಂದು ಹೋರ್ಡಿಂಗ್‌, ಒಂದು ಪೊಲೀಸ್‌ ವಾಹನ ಮತ್ತು ಒಂದು ಆಟೊ ರಿಕ್ಷಾವನ್ನು ಉದ್ರಿಕ್ತ ಜನರು ಧ್ವಂಸಗೊಳಿಸಿದರು. ಗುಂಪನ್ನು ತಡೆಯಲು ಪ್ರಯತ್ನಿಸುತ್ತಿದ್ದಾಗ ಒಬ್ಬ ಅಧಿಕಾರಿ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ’ ಎಂದು ಉಸ್ಮಾನಾಬಾದ್‌ ನಗರ ಠಾಣೆಯ ಇನ್‌ಸ್ಪೆಕ್ಟರ್‌ ಸುರೇಶ್‌ ಬುಧವಂತ್‌ ಪಿಟಿಐಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು