ಶನಿವಾರ, ಮೇ 15, 2021
24 °C

ಮಹಾರಾಷ್ಟ್ರದಲ್ಲಿ ಬೀದಿ ನಾಯಿ ಸಜೀವ ದಹನ: ಪ್ರಕರಣ ದಾಖಲು

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಠಾಣೆ: ಮಹಾರಾಷ್ಟ್ರದ ಠಾಣೆ ನಗರದಲ್ಲಿ ಬೀದಿ ನಾಯಿಯೊಂದನ್ನು ಜೀವಂತವಾಗಿ ಸುಟ್ಟು ಹಾಕಿದ ಆರೋಪದಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಿಟಿಜನ್ಸ್ ಫಾರ್ ಅನಿಮಲ್ ಪ್ರೊಟೆಕ್ಷನ್ ಫೌಂಡೇಶನ್‌ನ ಸದಸ್ಯರೊಬ್ಬರು ಈ ಸಂಬಂಧ ರಬೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ’ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದರು.

‘ಮಸನ್ವಾಡಾದಲ್ಲಿ ಅಪರಿಚಿತ ವ್ಯಕ್ತಿಗಳು ಬೀದಿನಾಯಿಯನ್ನು ಸಜೀವ ದಹನ ಮಾಡಿರುವ ಬಗ್ಗೆ ಮಂಗಳವಾರ ಸಂಜೆ ನನಗೆ ಮಾಹಿತಿ ಸಿಕ್ಕಿದೆ. ನಾನು ಘಟನಾ ಸ್ಥಳಕ್ಕೆ ತಲುಪಿದಾಗ ಅಲ್ಲಿ ಭಾಗಶಃ ಸುಟ್ಟ ನಾಯಿ ಪತ್ತೆಯಾಯಿತು. ತಕ್ಷಣವೇ ನಾಯಿಯನ್ನು ಪಶು ಚಿಕಿತ್ಸಾಲಯಕ್ಕೆ ಕರೆದುಕೊಂಡು ಹೋದೆವು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಾಯಿ ಮೃತಪಟ್ಟಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಬುಧವಾರ ಪ್ರಕರಣ ದಾಖಲಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು