ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡನೆ: ಮಹಾರಾಷ್ಟ್ರ

ಮಹಾರಾಷ್ಟ್ರ ರಾಜ್ಯಪಾಲರ ಭಾಷಣದಲ್ಲಿ ಪ್ರತಿಪಾದನೆ
Last Updated 1 ಮಾರ್ಚ್ 2021, 11:23 IST
ಅಕ್ಷರ ಗಾತ್ರ

ಮುಂಬೈ: ಕರ್ನಾಟಕದ ಜತೆಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸೋಮವಾರ ನಡೆದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಭಗತ್‌ ಸಿಂಗ್‌ ಕೊಶಿಯಾರಿ ಅವರು, ‘ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನನ್ನ ಸರ್ಕಾರ ಸಮರ್ಥವಾಗಿ ಮತ್ತು ಬಲವಾಗಿ ವಾದ ಮಂಡಿಸಿದೆ. ಮುಂದೆಯೂ ಇದೇ ರೀತಿ ವಾದ ಮಂಡಿಸಲಾಗುವುದು’ ಎಂದು ಹೇಳಿದರು.

‘ಗಡಿ ಪ್ರದೇಶಗಳಲ್ಲಿ ಮರಾಠಿ ಮಾತನಾಡುವವರ ಹಿತಾಸಕ್ತಿ ಕಾಪಾಡಲು ಮತ್ತು ನ್ಯಾಯ ದೊರಕಿಸಿಕೊಡಲು ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

‘ಸರ್ಕಾರ ಇತ್ತೀಚೆಗೆ ’ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದ: ಸಂಘರ್ಷ ಮತ್ತು ಸಂಕಲ್ಪ’ ಎನ್ನುವ ಪುಸ್ತಕವನ್ನು ಪ್ರಕಟಿಸಿದೆ. ಈ ಪುಸ್ತಕವನ್ನು ಶಾಸಕರಿಗೆ ಒದಗಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT