ಶುಕ್ರವಾರ, ಏಪ್ರಿಲ್ 23, 2021
30 °C

ಮಹಾರಾಷ್ಟ್ರ: ಸರಕು ಸಾಗಣೆ ರೈಲಿನಡಿ ಸಿಕ್ಕು ಹುಲಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನಾಗ್ಪುರ: ‘ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಹುಲಿಯೊಂದು ಸರಕು ಸಾಗಣೆ ರೈಲಿನಡಿ ಸಿಕ್ಕು ಮೃತಪಟ್ಟಿದೆ’ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದರು.

‘ಈ ಘಟನೆ ಬೆಳಿಗ್ಗೆ 8 ಗಂಟೆ ಸುಮಾರಿಗೆ ಗೊಂಗ್ಲಿ ಮತ್ತು ಹಿರದಮಾಲಿ ರೈಲು ನಿಲ್ದಾಣಗಳ ನಡುವೆ ನಡೆದಿದೆ. ಬಲ್ಹರ್ಷ-ಗೊಂಡಿಯಾ ರೈಲು ಮಾರ್ಗದಲ್ಲಿ ಸರಕು ಸಾಗಣೆ ರೈಲು ಚಲಿಸುತ್ತಿದ್ದಾಗ ಹುಲಿ ಅಡ್ಡ ಬಂದು ಈ ಘಟನೆ ನಡೆದಿದೆ’ ಎಂದು ಅವರು ಹೇಳಿದರು.

‘ಘಟನಾ ಸ್ಥಳಕ್ಕೆ  ಬಂದ ಅಧಿಕಾರಿಗಳು ಹುಲಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು