ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ತಳಿಯಿಂದ ಮೊದಲ ಸಾವು: ಮತ್ತಷ್ಟು ಬಿಗಿ ನಿರ್ಬಂಧ

Last Updated 26 ಜೂನ್ 2021, 1:46 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿಯಿಂದ ಮೊದಲ ಸಾವು ಸಂಭವಿಸಿದ್ದು, ಮತ್ತಷ್ಟು ಬಿಗಿ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಶುಕ್ರವಾರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿ ಹರಡುವಿಕೆ ಮತ್ತು ಪರಿಣಾಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಜತೆಗೆ, ಅಗತ್ಯಕ್ಕೆ ಅನುಗುಣವಾಗಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದರ ನಡುವೆ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಠಾಕ್ರೆ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಇದುವರೆಗೆ 3 ಕೋಟಿ ಡೋಸ್‌ ಲಸಿಕೆಯನ್ನು ಹಾಕಲಾಗಿದೆ.

‘ಕೋವಿಡ್ -19 ಸೋಂಕಿನ ಡೆಲ್ಟಾ ಪ್ಲಸ್ ರೂಪಾಂತರ ತಳಿಯಿಂದಾಗಿ ರತ್ನಾಗಿರಿ ಜಿಲ್ಲೆಯಲ್ಲಿ 80 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ’ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ.

ಇದುವರೆಗೆ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರದ 21 ಪ್ರಕರಣಗಳು ಮಾತ್ರ ವರದಿಯಾಗಿವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಎಲ್ಲಾ ಅಂಗಡಿಗಳನ್ನು ಕಡ್ಡಾಯವಾಗಿ ಸಂಜೆ 4 ಗಂಟೆಯೊಳಗೆ ಮುಚ್ಚಬೇಕು ಮತ್ತು ಸಾರ್ವಜನಿಕರ ಅನಗತ್ಯ ಓಡಾಟ ಮುಂದುವರಿದರೆ ಮಾಲ್‌ಗಳು ಮತ್ತು ಚಿತ್ರಮಂದಿರಗಳು ಬಂದ್‌ ಮಾಡಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT