ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿಗಾರಿಕೆಗೆ ವಿರೋಧ: ಆದಿವಾಸಿ ಮುಖಂಡರ ಬಂಧನ, ಬಿಡುಗಡೆ

ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಗಣಿಗಾರಿಕೆ
Last Updated 29 ಅಕ್ಟೋಬರ್ 2021, 11:03 IST
ಅಕ್ಷರ ಗಾತ್ರ

ನಾಗ್ಪುರ: ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯ ಎಟಪಲ್ಲಿ ತೆಹ್ಸೀಲ್‌ನಲ್ಲಿರುವ ಸುರ್ಜಗಡದಲ್ಲಿ ಗಣಿಗಾರಿಕೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಆದಿವಾಸಿ ಮುಖಂಡರನ್ನು ಶುಕ್ರವಾರ ಬಂಧಿಸಿದ್ದ ಪೊಲೀಸರು ನಂತರ ಬಿಡುಗಡೆ ಮಾಡಿದ್ದಾರೆ.

ಸುರ್ಜಗಡದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಹಾಗೂ ಖಾಸಗಿ ಕಂಪನಿಗೆ ನೀಡಿರುವ ಗುತ್ತಿಗೆಯನ್ನು ರದ್ದುಪಡಿಸುವಂತೆ ಕೋರಿ ಸ್ಥಳೀಯರು ಐದು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ.

‘ಸ್ಥಳೀಯರಿಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿತ್ತೇ ಹೊರತು ಧರಣಿ ನಡೆಸಲು ಅಲ್ಲ. ಜಿಲ್ಲಾ ಪಂಚಾಯ್ತಿ ಸದಸ್ಯ ಸೈನು ಗೋಟಾ ಮತ್ತು ಶೇಟ್ಕರಿ ಕಾಮಗಾರಿ ಪಕ್ಷದ ರಾಮದಾಸ್ ಜರಾಟೆ ಅವರೊಂದಿಗೆ ಸ್ಥಳೀಯರು ಜತೆಗೂಡಿ ಸೋಮವಾರದಿಂದ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಧರಣಿಯಲ್ಲಿದ್ದ ಕೆಲವು ಮುಖಂಡರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಲಾಗಿದೆ’ ಎಂದು ಗಡ್‌ಚಿರೋಲಿ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT