ಶುಕ್ರವಾರ, ಮೇ 27, 2022
31 °C

ವಿಕ್ರಾಂತ್ ಪ್ರಕರಣ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯಗೆ ಸಮನ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಮಹಾರಾಷ್ಟ್ರದ ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತು ಅವರ ಪುತ್ರ ನೀಲ್ ವಿರುದ್ಧ ದಾಖಲಾಗಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ಪೊಲೀಸರು ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಒಂಬತ್ತು ವರ್ಷಗಳ ಹಿಂದೆ ಕಾರ್ಯಾಚರಣೆಯಿಂದ ಸ್ಥಗಿತಗೊಂಡಿದ್ದ ನೌಕಾಪಡೆಯ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಹೆಸರಿನಲ್ಲಿ ಸಂಗ್ರಹಿಸಿದ ₹ 57 ಕೋಟಿಗೂ ಹೆಚ್ಚು ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣ ಸೋಮಯ್ಯ ಹಾಗೂ ಅವರ ಪುತ್ರನ ವಿರುದ್ಧ ದಾಖಲಾಗಿದೆ. ಬುಧವಾರ ಬೆಳಿಗ್ಗೆ 11ಕ್ಕೆ ತನಿಖಾಧಿಕಾರಿಯ ಎದುರು ಹಾಜರಾಗುವಂತೆ ಅವರಿಬ್ಬರಿಗೂ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಕಿರಿತ್ ಸೋಮಯ್ಯ ಮತ್ತು ಅವರ ನೀಲ್‌ ಅವರುಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ಮಾಜಿ ಸಂಸದರೂ ಆಗಿರುವ ಸೋಮಯ್ಯ ಅವರು ತಮ್ಮ ಮತ್ತು ನೀಲ್‌ ಮೇಲಿರುವ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.